ಹುಲಿ ಸೆರೆ ಕಾರ್ಯಾಚರಣೆ: ಅರಣ್ಯ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮೇಲೆ ಹೆಜ್ಜೇನು ದಾಳಿ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಹರಿಹರ ಗ್ರಾಮದಲ್ಲಿ ಗುರುವಾರ ನಡೆದಿದೆ. ಡಿಆರ್‌ಎಫ್‌ಒ, ಶಾರ್ಪ್ ಶೂಟರ್ ಕೆ. ಪಿ. ರಂಜನ್, ಮಾವುತ ಗುಂಡ ಅವರಿಗೆ ಹೆಜ್ಜೇನು ಕಡಿತವಾಗಿದೆ. ಮತ್ತಿಗೋಡು ಸಾಕಾನೆ ಶಿಬಿರದ ಆನೆಗಳೊಂದಿಗೆ ಹುಲಿ ಸೆರೆ ಕಾರ್ಯಾಚರಣೆ ನಡೆಯುತ್ತಿತ್ತು.