ಕ್ರಿಸ್ಮಸ್ ಹಬ್ಬದ ಪೂರ್ವ ತಯಾರಿ- ಕ್ಯಾರೋಲ್ಸ್ ಗಾಯನ, ಆಶೀರ್ವಚನಕ್ರಿಸ್ಮಸ್ ಹಬ್ಬದ ಅಂಗವಾಗಿ ಡಿ.1ರಿಂದ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವತಿಯಿಂದ ಧರ್ಮಗುರು, ಸಂತ ಕ್ಲಾರ ಕಾನ್ವೆಂಟಿನ ಕನ್ಯಾಸ್ತ್ರೀಯರು, ಸಂತ ಕ್ಲಾಸ್ ವೇಷಧಾರಿ, ಯುವಕ ಯುವತಿಯರು, ಕ್ಯಾರೋಲ್ಸ್ ವೃಂದದವರು ಕ್ರೈಸ್ತರ ಮನೆಗಳಿಗೆ ತೆರಳಿ ಪ್ರಾರ್ಥನೆ ಗಾಯನಗಳನ್ನು ಹಾಡುತ್ತಾ, ಕ್ರಿಸ್ತ ಜಯಂತಿ ಶುಭ ಸಂದೇಶವನ್ನು ಸಾರುತ್ತಾ ಆರ್ಶೀವಚನ ನೀಡಿ ಶುಭಾಶಯ ಕೋರುವ ಕಾರ್ಯದಲ್ಲಿ ತೊಡಗಿಸಿಕೊಂಡರು.