ಆತ್ಮರಕ್ಷಣೆಗಾಗಿ ಯುವತಿಯರು ಮಾರ್ಷಲ್ ಆರ್ಟ್ಸ್ ಕಲಿಯಿರಿ: ಕೆ.ಸಿ.ಕಾರ್ಯಪ್ಪ ಸಲಹೆಯುವತಿಯರು ಆತ್ಮರಕ್ಷಣೆಗಾಗಿ ಮಾರ್ಷಲ್ ಆರ್ಟ್ಸ್ ಕಲೆಯನ್ನು ಕಲಿಯುವ ಅಗತ್ಯವಿದ್ದು, ಈ ಮೂಲಕ ಸ್ವರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಯುವಪೀಳಿಗೆ ಮುಂದಾಗಬೇಕೆಂದು ನಿವೃತ್ತ ಏರ್ ಮಾರ್ಷಲ್ ಕೆ.ಸಿ.ಕಾರ್ಯಪ್ಪ ಕರೆ ನೀಡಿದ್ದಾರೆ.