ಗ್ರಾಮಕ್ಕೊಂದು ಸಹಕಾರ ಸಂಘ ಸರ್ಕಾರದ ಆಶಯ: ಮನು ಮುತ್ತಪ್ಪ70ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಕರಿಕೆ ಪ್ಯಾಕ್ಸ್ ಸಭಾಂಗಣದಲ್ಲಿ ನಡೆದ ‘ಸಹಕಾರ ಸಂಸ್ಥೆಗಳಲ್ಲಿ ಸರಳ ವ್ಯಾಪಾರ ಪ್ರಕ್ರಿಯೆ ಮತ್ತು ಉದಯೋನ್ಮುಖ ವಲಯಗಳ’ ದಿನಾಚರಣೆ ಉದ್ಘಾಟಿಸಿ ಮನು ಮನು ಮುತ್ತಪ್ಪ ಮಾತನಾಡಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ, ಸಹಕಾರ ಇಲಾಖೆ, ಕೊಡಗು ಜಿಲ್ಲೆ, ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.