ದೆಹಲಿ ಮಾಲಿನ್ಯ: ಕುಶಾಲನಗರದ ಕಾಫಿ ಉದ್ಯಮಿ ಬಲಿದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆಪಡೆದ ಅವರು ಮೂರನೇ ದಿನವೇ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.