ಗೌರವಧನ ಹೆಚ್ಚಳಕ್ಕೆ ಆಶಾ ಕಾರ್ಯಕರ್ತೆಯರ ಒತ್ತಾಯ: ತಪ್ಪಿದಲ್ಲಿ ಅಹೋರಾತ್ರಿ ಹೋರಾಟದ ಎಚ್ಚರಿಕೆಸಿಎಂ ಸಿದ್ದರಾಮಯ್ಯ ಘೋಷಿಸಿದ ಮಾಸಿಕ ಗೌರವಧನ, ಮಾಸಿಕ ೧೦,೦೦೦ ಮತ್ತು ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ೧೦೦೦ ರು. ಹೆಚ್ಚಳ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಮತ್ತು ಆಲ್ ಇಂಡಿಯಾ ಯುನೈಡೆಡ್ ಟ್ರೇಡ್ ಯೂನಿಯನ್ ಸೆಂಟರ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.