ಅಂಗಡಿಗಳಿಗೆ ಆರೋಗ್ಯ ಅಧಿಕಾರಿಗಳ ತಂಡ ದಿಢೀರ್ ಭೇಟಿ: ಪರಿಶೀಲನೆ, ದಂಡಸುಂಟಿಕೊಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳ ನಿರ್ದೇಶನದ ಮೇರೆಗೆ ಸುಂಟಿಕೊಪ್ಪ ಪಟ್ಟಣದ ಅಂಗಡಿ, ಹೊಟೇಲ್ಗಳಿಗೆ ಸುಂಟಿಕೊಪ್ಪ ಪೊಲೀಸ್ ಅಧಿಕಾರಿಯೊಂದಿಗೆ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಅನೀರಿಕ್ಷಿತ ಭೇಟಿ ನೀಡಿ ತಂಬಾಕು ಉತ್ಪನ್ನ ಮಾರಾಟ, ಸಿಒಟಿಪಿಎ ಕಾಯ್ದೆ ಉಲ್ಲಂಘನೆ ಬಗ್ಗೆ ಪರಿಶೀಲನೆ ನಡೆಸಿದರು.