ಇಂದು ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ಚಾಲನೆಮಡಿಕೇರಿಯ ಶ್ರೀ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ, ಶ್ರೀ ದಂಡಿನ ಮಾರಿಯಮ್ಮ, ಶ್ರೀ ಕಂಚಿ ಕಾಮಾಕ್ಷಿ ಹಾಗೂ ಶ್ರೀ ಕೋಟೆ ಮಾರಿಯಮ್ಮ ದೇವತೆಗಳ ಕರಗವು ನಗರದ ಪಂಪಿನ ಕೆರೆಯಿಂದ ಭಾನುವಾರ ಸಂಜೆ 5 ಗಂಟೆಗೆ ಹೊರಡಲಿದ್ದು, ಮುಂದಿನ ಒಂಬತ್ತು ದಿನಗಳ ಕಾಲ ನಗರ ಪ್ರದಕ್ಷಿಣೆ ನಡೆಸಲಿದೆ.