10 ಸಾವಿರ ಕೋಟಿ ರು. ಬರ ಪರಿಹಾರಕ್ಕೆ ಕೋಟ ಆಗ್ರಹಕರ್ನಾಟಕದಲ್ಲಿ 80 ಲಕ್ಷ ರೈತಾಪಿ ವರ್ಗವಿದೆ. ಪರ ಪರಿಸ್ಥಿತಿಯಿಂದ ರೈತರು ಪರಿತಪಿಸುತ್ತಿದ್ದಾರೆ. ಆದ್ದರಿಂದ ರು.10 ಸಾವಿರ ಕೋಟಿ ಬಿಡುಗಡೆ ಮಾಡುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ. ಜನ, ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದೆ. ಕೇಂದ್ರ ಸರ್ಕಾರ ಏನೂ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ನೀವು ಏನು ನೀಡಿದ್ದೀರಾ ಎಂದು ಅವರು ಪ್ರಶ್ನಿಸಿದರು.