• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮನ ಪ್ರತಿಷ್ಠಾಪನೆ: ಕುಶಾಲನಗರದಲ್ಲಿ ನಾಳೆ ವಿಶೇಷ ಪೂಜೆ
ಅಂದು ಬೆಳಗ್ಗೆ 8.30ಕ್ಕೆ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ಕುಶಾಲನಗರ ದೇವಾಲಯಗಳ ಒಕ್ಕೂಟ ಹಾಗೂ ಶ್ರೀರಾಮ ಸೇವಾ ಸಮಿತಿ ಸಹಯೋಗದೊಂದಿಗೆ ಜೀವನದಿ ಕಾವೇರಿಗೆ ವಿಶೇಷ ಮಹಾ ಆರತಿ ಬೆಳಗುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಹಕಾರ ಸಂಘ ಚುನಾವಣೆಯಲ್ಲಿ ಶರವಣಕುಮಾರ್‌ ನೇತೃತ್ವದ ತಂಡ ಜಯಭೇರಿ
ಕುಶಾಲನಗರ ಕೈಗಾರಿಕೋದ್ಯಮಿಗಳ ಮತ್ತು ವೃತ್ತಿ ನಿರತರ ವಿವಿಧೋದ್ದೇಶ ಸಹಕಾರ ಸಂಘದ 2024-29 ರ ಆಡಳಿತ ಮಂಡಳಿಗೆ ಚುನಾವಣೆಯಲ್ಲಿ ಸಹಕಾರಿ ಧುರೀಣ ಟಿ.ಆರ್‌.ಶರವಣಕುಮಾರ್ ನೇತೃತ್ವ ತಂಡ ಜಯಭೇರಿ ಗಳಿಸಿದೆ. ಸಾಮಾನ್ಯ ವರ್ಗದಿಂದ ಜೋಸೆಫ್ ವಿಕ್ಟರ್ ಸೋನ್ಸ್ (516), ಎಲ್ ನವೀನ್(513), ಜಿ ಡಿ ನವೀನ್(486), ಎಂ ವಿ ನಾರಾಯಣ (530),ಶರವಣ ಕುಮಾರ್ (562), ಶರತ್ ಕೆ ಪಿ ( 531), ಶಿವಪ್ರಕಾಶ್ ಎನ್ ಈ (501), ಸುರೇಶ್ ಕುಮಾರ್ ಕೆ (472), ಆಯ್ಕೆಯಾಗಿದ್ದಾರೆ. ಸುರೇಶ್ ಕೆ ಎನ್ (523) ಪ್ರಥಮ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.
ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ಉದ್ಘಾಟನೆ
ಕುಶಾಲನಗರದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಮತ್ತು ವಾಸವಿ ಯುವತಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ವಾಸವಿ ಮಹಲ್ ಸಭಾಂಗಣದಲ್ಲಿ ಶುಕ್ರಾವರ ರಕ್ತದಾನ ಶಿಬಿರ ನಡೆಯಿತು. ಶಿಬಿರದಲ್ಲಿ 36 ಜನರು ರಕ್ತದಾನ ಮಾಡಿದರು. ಪೊಲೀಸ್ ಸಿಬ್ಬಂದಿ, ಪತ್ರಕರ್ತರೂ ಪಾಲ್ಗೊಂಡರು.
ಬೇಡಿಕೆ ಈಡೇರಿಕೆ ಆಗ್ರಹಿಸಿ 23ರಿಂದ ಅಂಗನವಾಡಿ ನೌಕರರ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ 23 ರಿಂದ 25ರ ವರೆಗೆ ಪ್ರತಿಭಟನೆ ನಡೆಸಲು ಕೊಡಗು ಜಿಲ್ಲಾ ಅಂಗನವಾಡಿ ನೌಕರರ ಸಂಘ ನಿರ್ಧರಿಸಿದೆ. 23ರಂದು ಜಿಲ್ಲಾ ವ್ಯಾಪ್ತಿಯಲ್ಲಿರುವ ಸುಮಾರು 860 ಅಂಗನವಾಡಿ ಕೇಂದ್ರಗಳ ಕಾರ್ಯಕರ್ತರು ಕಾರ್ಯಸ್ಥಗಿತಗೊಳಿಸಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪೊನ್ನಂಪೇಟೆ ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿ.ಎಸ್.ಸುಮಿತ್ರ ತಿಳಿಸಿದ್ದಾರೆ.
ಆಯುಷ್ಮಾನ್ ಕಾರ್ಡ್ ಮಾಡಿಸಿ; ಆರೋಗ್ಯ ಸೇವೆ ಪಡೆಯಲು ಅವಕಾಶ
ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿ.ಪಿ.ಎಲ್. ಕಾರ್ಡ್‌ನ ಪ್ರತೀ ಕುಟುಂಬಗಳಿಗೆ ರು.5 ಲಕ್ಷ ವಾರ್ಷಿಕ ಮಿತಿಯೊಳಗೆ ಉಚಿತ ಚಿಕಿತ್ಸೆ, ಎ.ಪಿ.ಎಲ್ ಕಾರ್ಡ್‌ನ ಪ್ರತೀ ಕುಟುಂಬಗಳಿಗೆ ಪ್ಯಾಕೇಜ್ ದರದಲ್ಲಿ ಶೇ.30 ರಷ್ಟು ವಾರ್ಷಿಕವಾಗಿ ರು.1.5 ಲಕ್ಷದ ಮಿತಿಯೊಳಗೆ ಉಚಿತ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸುತ್ತದೆ. ಸಮೀಪದ ಗ್ರಾಮ ವನ್‌ ಕೇಂದ್ರಗಳಲ್ಲಿ ಈ ಕಾರ್ಡ್ ಮಾಡಿಸಬಹುದು.
ಶಾಸಕರ ಭರವಸೆ: ಬೀದಿ ಬದಿ ವ್ಯಾಪಾರಿಗಳ ಪ್ರತಿಭಟನೆ ಅಂತ್ಯ
ಮಡಿಕೇರಿ ರಾಜಾಸೀಟ್ ಸಮೀಪವಿದ್ದ ಬೀದಿಬದಿ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು. ಇದರ ವಿರುದ್ಧ ನಗರಸಭೆ ಎದುರು ವ್ಯಾಪಾರಿಗಳು ಕೈಗೊಂಡಿದ್ದ ಅಹೋರಾತ್ರಿ ಹೋರಾಟದ ಎರಡನೇ ದಿನವಾದ ಶುಕ್ರವಾರ ಅಂತ್ಯಗೊಂಡಿತು. ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಥಳಕ್ಕಾಗಮಿಸಿ ಸೂಕ್ತ ಕ್ರಮದ ಭರವಸೆ ನೀಡಿದ ಹಿನ್ನೆಲೆ ವ್ಯಾಪಾರಸ್ಥರು ಸಮಾಧಾನಗೊಂಡಿದ್ದಾರೆ.
ನಾಪೋಕ್ಲು, ಹೊದ್ದೂರಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ
ನಾಪೋಕ್ಲು ಹಾಗೂ ಹೊದ್ದೂರು ಗ್ರಾಮ ಪಂಚಾಯಿತಿಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಅಂಗವಾಗಿ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಾತ್ಯಕ್ಷಿ ನೀಡಲಾಯಿತು. ರೈತರಿಗೆ ಅನುಕೂಲವಾಗುವ ಕಿಸಾನ್ ಡ್ರೋನ್ ಪ್ರದರ್ಶನ ಗಮನ ಸೆಳೆಯಿತು. ಪ್ರದರ್ಶನ ವ್ಯಾನ್ ನಲ್ಲಿ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಾರ್ವಜನಿಕರಿಗೆ ಉಚಿತವಾಗಿ ಕ್ಯಾಲೆಂಡರ್, ಮಾಹಿತಿ ಕೈಪಿಡಿ ವಿತರಿಸಲಾಯಿತು.
ಸೋಮವಾರಪೇಟೆ: 26ರಂದು ಗಣರಾಜ್ಯೋತ್ಸವ ಅದ್ಧೂರಿ ಆಚರಣೆ
ಸೋಮವಾರಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಸೀಲ್ದಾರ್ ಎಸ್.ಎನ್. ನರಗುಂದ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ 26ರಂದು ಗಣರಾಜ್ಯೋತ್ಸವ ಅದ್ಧೂರಿಯಾಗಿ ಆಚರಿಸಲು ತೀರ್ಮಾನಿಸಲಾಯಿತು. ಪ್ರತಿ ಪೂರ್ವಭಾವಿ ಸಭೆಯಲ್ಲೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗೈರು ಹಾಜರಾಗುತ್ತಿರುವ ಬಗ್ಗೆ ತಹಸೀಲ್ದಾರ್‌ ಅಸಮಾಧಾನ ವ್ಯಕ್ತಪಡಿಸಿದರು.
27ರಿಂದ ಜಿಲ್ಲೆಯಾದ್ಯಂತ ‘ಸಂವಿಧಾನ ಜಾಗೃತಿ ಜಾಥ ಅಭಿಯಾನ’
ಸಂವಿಧಾನ ದಿನಾಚರಣೆ ಪ್ರಯುಕ್ತ 26ರಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಮಡಿಕೇರಿಯಲ್ಲಿ ಸಂವಿಧಾನ ಜಾಗೃತಿ ಜಾಥಾಗೆ ಚಾಲನೆ ನೀಡಲಿದ್ದಾರೆ. 27ರಿಂದ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮಾಹಿತಿ ನೀಡಿದ್ದಾರೆ.
ಚೆಟ್ಟಿಮಾನಿಯಲ್ಲಿ ‘ಗ್ರಾಮಸಿರಿ’ ಕಾರ್ಯಕ್ರಮಕ್ಕೆ ಚಾಲನೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ, ಭಾಗಮಂಡಲ ಮತ್ತು ಅಯ್ಯಂಗೇರಿ ಗ್ರಾಮ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ 50 ರ ಸಂಭ್ರಮ ಪ್ರಯುಕ್ತ ಚೆಟ್ಟಿಮಾನಿ ಗ್ರಾಮಸಿರಿ ಆಚರಣಾ ಸಮಿತಿ ಸಹಯೋಗದೊಂದಿಗೆ ಚೆಟ್ಟಿಮಾನಿ ಶಾಲಾ ಮೈದಾನದಲ್ಲಿ ಗುರುವಾರ ‘ಗ್ರಾಮಸಿರಿ’ ಕಾರ್ಯಕ್ರಮಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.
  • < previous
  • 1
  • ...
  • 425
  • 426
  • 427
  • 428
  • 429
  • 430
  • 431
  • 432
  • 433
  • ...
  • 475
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved