ಮಾಂದಲ್ ಪಟ್ಟಿಗೆ ಪ್ರವಾಸಿಗರ ಕರೆದೊಯ್ಯಲು ಅವಕಾಶಕ್ಕೆ ಆಗ್ರಹಕಳೆದ ಅನೇಕ ವರ್ಷಗಳಿಂದ ಪ್ರವಾಸಿಗರನ್ನು ಜೀಪ್ ನಲ್ಲಿ ಕರೆದೊಯ್ಯುವ ಮೂಲಕ ಸ್ಥಳೀಯ ಯುವಕರು ಉದ್ಯೋಗವನ್ನು ಕಂಡುಕೊಂಡು ಬದುಕು ಕಟ್ಟಿಕೊಂಡಿದ್ದಾರೆ. ಬಾಡಿಗೆ ಮಾಡುವ ಸಂದರ್ಭ ಯಾರೂ ಕಾನೂನು ಉಲ್ಲಂಘಿಸಿಲ್ಲ. ಆದರೆ ಅಧಿಕಾರಿಗಳು ಬದಲಾದಂತೆ ಯಾರದ್ದೋ ಒತ್ತಡಕ್ಕೆ ಮಣಿದು ಒಂದೊಂದು ನಿಯಮ ಜಾರಿ ಮಾಡಲಾಗುತ್ತಿದ್ದು, ಇದರಿಂದ ಚಾಲಕರ ಜೀವನ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಚಾಲಕ, ಮಾಲೀಕರು ತಿಳಿಸಿದ್ದಾರೆ.