ಅಮಿತ್ ಶಾ ಭೇಟಿ ಮಾಡಿದ ಒಡೆಯರ್: ಹಲವು ಸಮಸ್ಯೆಗಳ ಚರ್ಚೆರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಬಿಡುಗಡೆ ಮಾಡುವ ಬಗ್ಗೆ ಗೃಹ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು. ಕೊಡಗಿನಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಆಸ್ತಿಪಾಸ್ತಿ ನಷ್ಟವಾಗಿದೆ. ಇವುಗಳಿಗೆ ಎನ್‌ಡಿಆರ್‌ಎಫ್ ಮೂಲಕ ಪರಿಹಾರ ಒದಗಿಸಲು ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಲಾಯಿತು ಎಂದು ಒಡೆಯರ್ ತಿಳಿಸಿದ್ದಾರೆ.