ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ: ಡಿಸಿ ಸೂಚನೆಮಡಿಕೇರಿಯ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕುಡಿಯುವ ನೀರಿನ ಪೂರೈಕೆ ಕುರಿತು ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ವೆಂಕಟರಾಜ ಮಾತನಾಡಿ, ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು ಎಂದು ಸೂಚಿಸಿದರು.