ಕಾರಿನಲ್ಲಿ ಸರ್ಕಾರಿ ಗುತ್ತಿಗೆ ವೈದ್ಯ ಮೃತದೇಹ ಪತ್ತೆಸತೀಶ್ ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ನಿವಾಸಿಯಾಗಿದ್ದು, ಇತ್ತೀಚಿಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿ ಬಂದಿತ್ತು. ಬಂಧಿತ ಆರೋಪಿಗಳು ವಿಚಾರಣೆ ವೇಳೆ ಸತೀಶ್ ಹೆಸರು ಹೇಳಿದ್ದರು ಎನ್ನಲಾಗಿದೆ. ಅಲ್ಲದೆ ಭ್ರೂಣ ಹತ್ಯೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವೈದ್ಯ ಸತೀಶ್ ತಲೆಮರೆಸಿಕೊಂಡಿದ್ದರು.