ಸೋಮವಾರಪೇಟೆ ಜೇಸಿಐ ಮಹಿಳಾ ದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಲೇಡಿ ವಿಂಗ್ ವತಿಯಿಂದ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಜೇಸಿಐ ವಲಯ ಸಂಯೋಜಕಿ ರೂಪಾ ಗೋಪಾಲಕೃಷ್ಣ, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ಹಾಗೂ ಜೇಸಿಐ ಅಧ್ಯಕ್ಷ ವಸಂತ್ ಅವರನ್ನು ಸನ್ಮಾನಿಸಲಾಯಿತು.