ಜಿಲ್ಲಾಡಳಿತದ ಸಹಾಯವಾಣಿಗೆ ಮಾಹಿತಿ ನೀಡಿ ವಿಪತ್ತು ನಿರ್ವಹಣೆಗೆ ಸಹಕರಿಸಿ: ಡಾ.ಎನ್.ವಿ.ಪ್ರಸಾದ್ವಿಪತ್ತು ನಿರ್ವಹಣೆ ಸಂಬಂಧ ಜಿಲ್ಲಾ ಮಟ್ಟದಲ್ಲಿ ವಾಟ್ಸಾಪ್ ಗ್ರೂಪ್ ಮಾಡಿರುವಂತೆ ತಾಲೂಕು ಮಟ್ಟದಲ್ಲಿಯೂ ಸಹ ತಹಸೀಲ್ದಾರರ ನೇತೃತ್ವದಲ್ಲಿ ವಾಟ್ಸಾಪ್ ಗುಂಪು ರಚಿಸಿಕೊಂಡು ತಾ.ಪಂ.ಇಒ, ಪಿಡಿಒ, ಗ್ರಾ.ಪಂ.ಕಾರ್ಯದರ್ಶಿಗಳು, ಲೋಕೋಪಯೋಗಿ, ಪಂಚಾಯತ್ ರಾಜ್ ಎಂಜಿನಿಯರ್‌ಗಳು, ಪೊಲೀಸ್, ಅಗ್ನಿಶಾಮಕ, ಗ್ರಾಮ ಸಹಾಯಕರು, ಗೃಹರಕ್ಷಕದಳ ಗುಂಪಿಗೆ ಸೇರಿಸಿಕೊಂಡು ವಿಪತ್ತು ನಿರ್ವಹಣೆಯನ್ನು ನಿರ್ವಹಿಸಬೇಕು.