ನಿಟ್ಟೂರು ಗ್ರಾಮದ ವಿವಿಧೆಡೆ ಸ್ವಚ್ಚತಾ ಅಭಿಯಾನನಿಟ್ಟೂರು ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಪವಿ ಸ್ವಯಂ ಸೇವಾ ಟ್ರಸ್ಟ್ , ಶಿವಶಕ್ತಿ ಸ್ವಸಹಾಯ ಸಂಘ ಕಾರ್ಮಾಡು, ನಿಟ್ಪೂರು ಗ್ರಾಮದ ಸಂಜೀವಿನಿ ಸ್ವಸಹಾಯ ಸಂಘಗಳ ಒಕ್ಕೂಟದ ಸಹಕಾರದೊಂದಿಗೆ ನಿಟ್ಟೂರು ಮುಖ್ಯ ರಸ್ತೆ ಸೇರಿದಂತೆ ವಿವಿಧ ರಸ್ತೆಗಳ ಬದಿಯಲ್ಲಿ ಎಸೆಯಲಾಗಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಹೆಕ್ಕುವ ಮೂಲಕ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆಯದಂತೆ ಮತ್ತು ಪ್ಲಾಸ್ಟಿಕ್ ಕೈ ಚೀಲಗಳನ್ನು ಬಳಸದಂತೆ ಅರಿವು ಮೂಡಿಸುವ ಕಾರ್ಯ ನಡೆಸಲಾಯಿತು.