• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೈಸೂರು-ಕೊಡಗು ಕ್ಷೇತ್ರಕ್ಕೆ ನಾನೂ ಟಿಕೆಟ್‌ ಆಕಾಂಕ್ಷಿ: ಎಚ್‌.ವಿಶ್ವನಾಥ್‌
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್‌, ಕಾಂಗ್ರೆಸ್ ಪಕ್ಷದಿಂದ ಟಿಕೆಟ್‌ಗೆ ಪ್ರಯತ್ನ ಮಾಡುವುದರಲ್ಲಿ ತಪ್ಪು ಏನಿದೆ? ನಾನು ಕೊಡಗು ಮೈಸೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಕಾಂಗ್ರೆಸ್ ಪಕ್ಷದಲ್ಲಿ ಎಲ್ಲರಿಗೂ ಟಿಕೆಟ್ ಕೊಡುತ್ತಾರೆ ಎಂದು ಪ್ರಯತ್ನ ಮಾಡುವುದಲ್ಲ. ಪ್ರಯತ್ನ ಮಾಡುತ್ತಾ ಮಾಡುತ್ತಾ ಸಿಕ್ಕಬಹುದು, ಸಿಕ್ಕದೇ ಇರಬಹುದು ಎಂದರು.
ಸಹಕಾರ ಕ್ಷೇತ್ರದಲ್ಲಿ ದೇಶ 5 ಟ್ರಿಲಿಯನ್‌ ಡಾಲರ್‌ ಸಾಧನೆ ದಾಪುಗಾಲು: ಮನು ಮುತ್ತಪ್ಪ
ಕೊಡಗು ಜಿಲ್ಲೆಯ ಪ್ಯಾಕ್ಸ್, ಪಟ್ಟಣ ಸಹಕಾರ ಬ್ಯಾಂಕ್, ಪಿಕಾರ್ಡ್ ಬ್ಯಾಂಕ್, ಲ್ಯಾಂಪ್ಸ್ ಹಾಗೂ ಇತರೆ ಸಹಕಾರ ಸಂಘಗಳ ಕಾರ್ಯನಿರ್ವಾಹಕರಿಗೆ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಹಾಗೂ ಲೆಕ್ಕಪರಿಶೋಧನಾ ವರದಿಯ ಪರಿಷ್ಕೃತ ನಮೂನೆ ಕುರಿತು ಮಡಿಕೇರಿಯ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಶಿಕ್ಷಣ ಕಾರ್ಯಕ್ರಮ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ. ಮನು ಮುತ್ತಪ್ಪ ಅವರು,ಜಿಲ್ಲೆಯಲ್ಲಿ ಅದ್ಭುತ ರೀತಿಯಲ್ಲಿ ಯಶಸ್ವಿನಿ ಗುರಿ ಸಾಧಿಸಲಾಗಿದೆ.
ಐಗೂರು ಗ್ರಾಮಕ್ಕೆ ಸಂವಿಧಾನ ಜಾಗೃತಿ ರಥ
ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಸಂವಿಧಾನ ಜಾಗೃತಿ ರಥದೊಂದಿಗೆ ವಿವಿಧ ಇಲಾಖೆಯ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಜರಿದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯಲ್ಲಿ ಸಾಗಿ ಸಂವಿಧಾನ ಘೋಷವಾಕ್ಯದೊಂದಿಗೆ ಶೋಭಾಯಾತ್ರೆ ನಡೆಸಿದರು.
ಒಳ ಮೀಸಲಾತಿ ನೀಡಲು ಮಾದಿಗ ಪ್ರಮುಖರ ಆಗ್ರಹ
ಕೊಡಗು ಜಿಲ್ಲಾ ಮಾದಿಗರ ಆತ್ಮ ಗೌರವ ಸಮಾವೇಶ ಮಡಿಕೇರಿಯ ರೋಟರಿ ಸಭಾಂಗಣದಲ್ಲಿ ನಡೆಯಿತು. ಸಮಾವೇಶದಲ್ಲಿ ಮಾದಿಗರಿಗೆ ಒಳ ಮೀಸಲು ನೀಡುವ ಮೂಲಕ ಅವರು ಸಮಾಜದ ಮುಖ್ಯ ವಾಹಿನಿಗೆ ಬರುವಂತಾಗಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು. ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾದ ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಮೀಸಲಾತಿ ಹೋರಾಟ ಕುರಿತು ವಿಸ್ತ್ರೃತ ಮಾಹಿತಿ ನೀಡಿದರು.
ಮಡಿಕೇರಿ: ಬೃಹತ್ ಆರೋಗ್ಯ ತಪಾಸಣಾ ಶಿಬಿರ
ಮಂಗಳವಾರ ಸೋಮವಾರಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಶಿಬಿರದಲ್ಲಿ ಸಾಮಾನ್ಯ ವೈದ್ಯಶಾಸ್ತ್ರ, ಶಸ್ತ್ರ ಚಿಕಿತ್ಸೆ, ನೇತ್ರ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ, ಮಕ್ಕಳ, ಚರ್ಮ ರೋಗ, ಕಿವಿ ಮೂಗು ಗಂಟಲು, ಮೂಳೆ ಮತ್ತು ಕೀಲು, ಸಮುದಾಯ ವ್ಯೆದ್ಯಕೀಯ, ದಂತ, ಮಾನಸಿಕ ರೋಗ, ಅಸಾಂಕ್ರಾಮಿಕ ರೋಗಗಳ ನುರಿತ ತಜ್ಞ ವ್ಯೆದ್ಯರು ವೈದ್ಯಕೀಯ ಸೇವೆಯನ್ನು ನೀಡಲಾಯಿತು.
ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಸಿದ್ದರಾಮಯ್ಯ ಬಹುಮಾನ ವಿತರಣೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ನಿಮಿತ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿತರಿಸಿದರು. ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ವಿಜೇತ 9 ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳು, ಸ್ಮರಣಿಕೆ ಹಾಗೂ ಪುಸ್ತಕಗಳನ್ನು ವಿತರಿಸಿ ಶುಭಕೋರಿದರು.
ಕೊಕ್ಕೋ ಪ್ರೂನಿಂಗ್, ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಾಗಾರ

ಪೆರಾಜೆ ಗ್ರಾಮ ಪಂಚಾಯಿತಿಯ ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ರೈತ ಸದಸ್ಯರ ತೋಟಗಳಲ್ಲಿ ಕೊಕ್ಕೋ ಪ್ರೂನಿಂಗ್ (ಸವರುವಿಕೆ) ಮತ್ತು ತೋಟದ ನಿರ್ವಹಣೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಕರ್ನಾಟಕಕ್ಕೆ ಅನುದಾನ ತಾರತಮ್ಯ: ಕೃಷ್ಣ ಬೈರೆ ಗೌಡ ಅಸಮಾಧಾನ
ರಾಜ್ಯ ಸರ್ಕಾರ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿರುವುದಕ್ಕೆ ಲೆಹರ್ ಸಿಂಗ್ ಹೇಳಿಕೆಗೆ ತಿರುಗೇಟು ನೀಡಿದ ಕಂದಾಯ ಸಚಿವ ಕೃಷ್ಣಬೈರೆಗೌಡ, ಕೇಂದ್ರ, ರಾಜ್ಯ ಸರ್ಕಾರಗಳೆರಡರ ಬಜೆಟ್ ಜಾಸ್ತಿಯಾಗಿದೆ. ಆದರೆ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಅಷ್ಟೇ ಉಳಿದಿದೆ ಎಂದರು. ವಿವಿಧ ರಾಜ್ಯಗಳು ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಸಜ್ಜಾಗಿರುವುದನ್ನು ಬೊಟ್ಟು ಮಾಡಿದರು.
ಹೆಬ್ಬಾಲೆ: ಮಾ.2ರಂದು ಜಾನಪದ ಗ್ರಾಮಸಿರಿ ಸಂಭ್ರಮ
ಹೆಬ್ಬಾಲೆಯಲ್ಲಿ ಮಾ.೨ರಂದು ಬೆಳಗ್ಗೆ 8.30 ಗಂಟೆಗೆ ಪೂರ್ಣಕುಂಭ ಕಳಶದೊಂದಿಗೆ ಎತ್ತಿನಗಾಡಿಯಲ್ಲಿ ಅತಿಥಿಗಳನ್ನು ಮೆರವಣಿಗೆ ನಡೆಸಿ ವೇದಿಕೆಗೆ ಕರೆತರಲಾಗುವುದು. ಮೂರು ಗ್ರಾಮದ ಪ್ರಮುಖರ ಸಮ್ಮುಖದಲ್ಲಿ ಉದ್ಘಾಟನಾ ಸಮಾರಂಭ ನಡೆಯಲಿದೆ. ನಂತರ ಜಾನಪದ ಗೋಷ್ಠಿ, ಜಾನಪದ ಕ್ರೀಡಾ ಸ್ಪರ್ಧೆ, ಜಾನಪದ ನೃತ್ಯ, ಗೀತಗಾಯನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲು ಸಭೆ ನಿರ್ಧರಿಸಿತು.
ಧರ್ಮದ ತಳಹದಿಯಿಂದ ಆಂತರಿಕ ಸುಖ, ಶಾಂತಿ ಹೊಂದಲು ಸಾಧ್ಯ: ಸದಾಶಿವ ಶ್ರೀ
ಕೊಡಗು ಜಿಲ್ಲಾ ವಚನ ಸಾಹಿತ್ಯ ವೇದಿಕೆ ವತಿಯಿಂದ ಕೂಡಿಗೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಿಜ ಶರಣ ಅಂಬಿಗರ ಚೌಡಯ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಕೊಡ್ಲಿಪೇಟೆಯ ಕಿರಿಕೊಡ್ಲಿಮಠದ ಪೀಠಾಧಿಪತಿ ಶ್ರೀ ಸದಾಶಿವ ಸ್ವಾಮೀಜಿ ಪಾಲ್ಗೊಂಡು ಆಶೀರ್ವಚನ ನೀಡಿದರು. ವಿದ್ಯಾರ್ಥಿಗಳಿಂದ ಅಂಬಿಗರ ಚೌಡಯ್ಯ ಅವರ ವಚನಗಳ ಗಾಯನ ನಡೆಯಿತು.
  • < previous
  • 1
  • ...
  • 483
  • 484
  • 485
  • 486
  • 487
  • 488
  • 489
  • 490
  • 491
  • ...
  • 548
  • next >
Top Stories
ಕೇಂದ್ರದ ಅನ್ಯಾಯ ಬಗ್ಗೆ ಜೆಡಿಎಸ್‌, ಬಿಜೆಪಿ ಸಂಸದರಿಂದ ಮೌನ : ಸಿಎಂ
ವೋಟ್‌ ಚೋರಿ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್‌ಗೆ ಬಿಹಾರದಲ್ಲಿ ತಕ್ಕಪಾಠ : ಎಚ್ಡಿಕೆ
ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗೆ ತಣ್ಣೀರು?
ದೇಸಿ ಜ್ಞಾನ ಪರಿಸುತ್ತಿರುವ ಕನ್ನಡ ವಿವಿ ಪ್ರಸಾರಾಂಗ
ನಿರ್ದೇಶಕರು ತಮ್ಮೂರಿನ ಕತೆ ಹೇಳಿದ್ದಾರೆ : ಮಾರ್ನಮಿ ಚಿತ್ರದ ಬಗ್ಗೆ ಕಿಚ್ಚ ಸುದೀಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved