ಅಕಾಲಿಕ ಮಳೆ: ಕಾಫಿ ಕೃಷಿಗೆ ಸಮಸ್ಯೆದಿನನಿತ್ಯ ಮೋಡ ಕವಿದ ವಾತಾವರಣವಿದ್ದು, ಇದು ಕಾಫಿ ಫಸಲಿನ ಮೇಲೆ ಪರಿಣಾಮ ಬೀರಿದೆ. ಕಾಫಿ ಹಣ್ಣಾಗಿದ್ದು, ಕೊಯ್ಲು ಕೆಲಸ ಆರಂಭಗೊಂಡಿದೆ. ಕೊಯ್ಲು ಮಾಡಿದ ಕಾಫಿಯನ್ನು ಒಣಗಿಸುವುದು, ಜತೆಗೆ ತೋಟದಲ್ಲಿ ಹಣ್ಣಾಗಿ ನಿಂತಿರುವ ಕಾಫಿ ಉದುರುತ್ತಿರುವುದು ಬೆಳಗಾರರ ಆತಂಕಕ್ಕೆ ಕಾರಣವಾಗಿದೆ.