ಮೂರ್ನಾಡು: ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಮೂರ್ನಾಡಿನ ಪ್ರಕೃತಿ ಕಾಂಪ್ಲೆಕ್ಸ್ ಸಭಾಂಗಣದಲ್ಲಿ ನಡೆದ ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆಯಲ್ಲಿ 3 ತಿಂಗಳಿನಿಂದ 9 ವರ್ಷದವರೆಗಿನ ೯೩ ಮಕ್ಕಳು ಶ್ರೀಕೃಷ್ಣ ವೇಷಧಾರಿಗಳಾಗಿ ಗಮನ ಸೆಳೆದರು. ಕುಶಾಲನಗರ, ಪೊನ್ನಂಪೇಟೆ, ನಾಪೋಕ್ಲು ಮತ್ತಿತರ ಭಾಗಗಳಿಂದ ಹೆಚ್ಚಿನ ಸಂಖ್ಯೆಯ ಪುಟಾಣಿ ಸ್ಪರ್ಧಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಅರ್ಥಪೂರ್ಣಗೊಳಿಸಿದರು.