13ರಿಂದ ಬಿಜಿಎಸ್ ಕಪ್ ರಾಜ್ಯ ಮಟ್ಟದ ಕಬಡ್ಡಿಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿಯ ಶ್ರೀ ನಿರ್ಮಲಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಖ ಮಠಾಧೀಶ ಶ್ರೀ ಶಂಭುನಾಥ ಸ್ವಾಮೀಜಿ, ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಅರಕಲಗೂಡು ಶಾಸಕ ಎ.ಮಂಜು, ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸಿ.ಟಿ. ರವಿ, ಭೋಜೇಗೌಡ, ಸೂರಜ್ ರೇವಣ್ಣ, ಮಾಜಿ ಶಾಸಕ ಅಪ್ಪಚ್ಚುರಂಜನ್, ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ.