ಕೊಡಗಿನ ಪಾಲಂಗಾಲ ಅರಣ್ಯ ಪ್ರದೇಶದಲ್ಲಿ ಭಾರಿ ಭೂಕುಸಿತ!ಅರಣ್ಯದ 15 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಮನೆಗಳು ಇಲ್ಲದ್ದರಿಂದ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಗುಡ್ಡ ಕುಸಿತದಿಂದ ಹಲವು ಮರಗಳು ಧರೆಗೆ ಉರಳಿವೆ. ಮಾಹಿತಿ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.