ಕೊಡವಾಮೆ ಬಾಳೋ ಪಾದಯಾತ್ರೆ: ಎರಡನೆ ದಿನ ಕೊಡವ ಮುಸ್ಲಿಂ ಜನಾಂಗ ಭಾಗಿಕೊಡವಾಮೆ ಹಾಗೂ ಕೊಡವ ಸಂಸ್ಕೃತಿಯ ವಿರುದ್ಧ ನಿರಂತರ ನಡೆಯುತ್ತಿರುವ ದಬ್ಬಾಳಿಕೆಯನ್ನು ಖಂಡಿಸಿ ಅಖಿಲ ಕೊಡವ ಸಮಾಜ ನೇತೃತ್ವದಲ್ಲಿ ವಿವಿಧ ಕೊಡವ ಸಮಾಜ ಹಾಗೂ ಸಂಘ ಸಂಸ್ಥೆ ಸೇರಿದಂತೆ ಕೊಡವ ಭಾಷಿಕ ಸಮುದಾಯಗಳು ಕುಟ್ಟದಿಂದ ಮಡಿಕೇರಿ ವರೆಗೆ ಕೈಗೊಂಡ ‘ಕೊಡವಾಮೆ ಬಾಳೋ’ ಪಾದಯಾತ್ರೆಯ ಎರಡನೇ ದಿನ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಂಡರು. ಪೊನ್ನಂಪೇಟೆ ಕೊಡವ ಸಮಾಜ, ತಳಿಯತಕ್ಕಿ ಬೊಳಕ್ ಹಾಗೂ ದುಡಿ ಕೊಟ್ಟ್ ಪಾಟ್ನೊಂದಿಗೆ ಸ್ವಾಗತಿಸುವ ಮೂಲಕ ಎರಡನೇ ದಿನದ ಪಾದಯಾತ್ರೆ ಸಂಪನ್ನಗೊಂಡಿತು.