ಫೈನಾನ್ಸ್ ಕಂಪನಿ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ: ಶಾಸಕ ಪೊನ್ನಣ್ಣ ಆರೋಪಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕೇಂದ್ರ ಸರ್ಕಾರ ಕಾರಣ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಆರೋಪಿಸಿದ್ದಾರೆ. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡಿರುವ ಆರ್ಥಿಕ ನೀತಿಗಳೇ ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಾರಣ. ನಬಾರ್ಡ್ನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಕಡಿತವಾಗಿದೆ ಎಂದರು.