ಹಿರಿಯರಿಂದ ಬಳುವಳಿಯಾಗಿ ಬಂದ ಕಲೆಯ ಸಂರಕ್ಷಣೆ ಕರ್ತವ್ಯ: ಶ್ರೀ ಶ್ರೀನಿವಾಸ ನರಸಿಂಹ ಗುರೂಜಿಶ್ರೀ ಬಿ.ಸಿ ರಂಗಪ್ಪ ವಿದ್ಯಾನಿಧಿ ಟ್ರಸ್ಟ್ ಬೆಂಗಳೂರು, ಶ್ರೀ ಯತಿರಾಜದಾಸರ್ ಗುರುಪೀಠ ಮೇಲುಕೋಟೆ ಮಂಡ್ಯ ಜಿಲ್ಲೆ ಮತ್ತು ಕೊಡಗು ಕಣಿಯರ ವಿದ್ಯಾಭಿವೃದ್ಧಿ ಸಂಘ ಸಂಯುಕ್ತ ಆಶ್ರಯದಲ್ಲಿ ವಿರಾಜಪೇಟೆ ಬಿಟ್ಟಂಗಾಲ ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಣಿಯರ್ ಜನಾಂಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.