ಮಾಜಿ ಶಾಸಕ ಅರುಣ್ ಮಾಚಯ್ಯ ಮನೆಗೇ ಕಾಡಾನೆ ಭೇಟಿ!ದಕ್ಷಿಣ ಕೊಡಗಿನ ವಿವಿಧ ಕಡೆಗಳಲ್ಲಿ ಕಾಡಾನೆ, ಹುಲಿ, ಚಿರತೆ ಸೇರಿದಂತೆ ಕಾಡು ಪ್ರಾಣಿಗಳು ನಾಡಿಗೆ ಬರುವ ಪ್ರಮಾಣ ಜಾಸ್ತಿಯಾಗಿದ್ದು, ಜನರು ಆತಂಕಗೊಂಡಿದ್ದಾರೆ. ಪೊನ್ನಂಪೇಟೆ ತಾಲೂಕಿನ ಕೋಣನಕಟ್ಟೆಯಲ್ಲಿರುವ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ನಿವಾಸಕ್ಕೆ ಬುಧವಾರ ಬೆಳಗ್ಗೆ ಕಾಡಾನೆ ಭೇಟಿ ನೀಡಿದೆ