ಆಲೂರುಸಿದ್ದಾಪುರ ಮಕ್ಕಳ ಗ್ರಾಮಸಭೆ: ಮಕ್ಕಳಿಂದ ಪ್ರಶ್ನೆಗಳ ಸುರಿಮಳೆಆಲೂರುಸಿದ್ದಾಪುರ ಗ್ರಾಮ ಪಂಚಾಯಿತಿ ಮತ್ತು ನಾವು ಪ್ರತಿಷ್ಠಾನ ಸಂಸ್ಥೆ ಸಹ ಭಾಗಿತ್ವದಲ್ಲಿ ಗ್ರಾ.ಪಂ. ವ್ಯಾಪ್ತಿಯ ಮಕ್ಕಳ ಗ್ರಾಮಸಭೆಯನ್ನು ಗ್ರಾ.ಪಂ. ಅಧ್ಯಕ್ಷೆ ಮೀನಾಕ್ಷಿ ಮತ್ತು ಅಂಕನಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಯಶ್ವಿನಿ ಜಂಟಿ ಅಧ್ಯಕ್ಷತೆಯಲ್ಲಿ ಆಲೂರುಸಿದ್ದಾಪುರ ವಿಜಯ ಯುವಕ ಸಂಘದ ಸಭಾಂಗಣದಲ್ಲಿ ನಡೆಸಲಾಯಿತು.