ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ಮಿತಿ 2.50 ಲಕ್ಷ ರು. ಮತ್ತು ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅವರಿಗೆ 1 ಲಕ್ಷ ರು.ಗಳ ಆದಾಯ ಮಿತಿ ಇರುತ್ತದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತದೆ. ಒಮ್ಮೆ ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ಸೇರಿದಲ್ಲಿ 10ನೇ ತರಗತಿ ವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದು.