ಮುದ್ದಂಡ ಕಪ್ ಕೊಡವ ಕೌಟುಂಬಿಕ ಹಾಕಿ ಉತ್ಸವ ಲೋಗೋ ಬಿಡುಗಡೆ25ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಉತ್ಸವ, ಮುದ್ದಂಡ ಹಾಕಿ ನಮ್ಮೆ ಈ ಬಾರಿ ಮಡಿಕೇರಿಯಲ್ಲಿ ನಡೆಯಲಿದ್ದು, ಹಾಕಿ ಉತ್ಸವದ ಲೋಗೋವನ್ನು ಗಣ್ಯರು ಶನಿವಾರ ಬಿಡುಗಡೆ ಮಾಡಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮಾ.28ರಿಂದ ಏಪ್ರಿಲ್ 27ರ ವರೆಗೆ ಒಂದು ತಿಂಗಳ ಕಾಲ ಪಂದ್ಯಾವಳಿ ನಡೆಯಲಿದೆ.