ಗೃಹಭಾಗ್ಯ ಯೋಜನೆ: 12 ಪೌರಕಾರ್ಮಿಕರಿಗೆ ವಸತಿ ಸೌಲಭ್ಯಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕ ಡಾ.ಮಂತರ್ ಗೌಡ ಬುಧವಾರ ಚಾಲನೆ ನೀಡಿದರು. ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರು. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರು. ವೆಚ್ಚದಲ್ಲಿ ನೆಲಮಹಡಿ ಸೇರಿ ಮೂರು ಅಂತಸ್ತಿನ 12 ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಭೂಮಿ ಪೂಜೆ ನೆರವೇರಿಸಿದರು.