ಕುಶಾಲನಗರ: ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದಿಂದ ನಿಕಾನ್ ಕ್ಯಾಮರಾ ಕಾರ್ಯಾಗಾರ ಕುಶಾಲನಗರದಲ್ಲಿ ನಡೆಯಿತು.ಕುಶಾಲನಗರ ಟಾಪ್ ಇನ್ ಟೌನ್ ಹೋಟೆಲ್ ಸಭಾಂಗಣದಲ್ಲಿ ನಡೆದ ಕಾರ್ಯಗಾರವನ್ನು ಬೈಲುಕುಪ್ಪೆ ಬೋಧಿಸತ್ವ ಟ್ರಸ್ಟ್ ಸ್ಥಾಪಕ ಕರ್ಮ ರಿಂಫೊಚೆ ಉದ್ಘಾಟಿಸಿ ಮಾತನಾಡಿದರು.ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ವಿ.ಪಿ. ಶಶಿಧರ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿ, ಆಧುನಿಕತೆಗೆ ತಕ್ಕಂತೆ ತಮ್ಮ ವೃತ್ತಿಪರತೆಯನ್ನು ಮೇಲ್ದರ್ಜೆಗೆ ಏರಿಸಿಕೊಂಡು ಗ್ರಾಹಕರಿಗೆ ಉತ್ತಮ ಸೇವೆ ನೀಡುವಲ್ಲಿ ಮುಂದೆ ಸಾಗಬೇಕಿದೆ ಎಂದು ಕರೆ ನೀಡಿದರು.
ಕುಶಾಲನಗರ ರೋಟರಿ ಪ್ರಮುಖರಾದ ಎಂ.ಡಿ. ರಂಗಸ್ವಾಮಿ, ಕರವೇ ರಾಜ್ಯ ಸಂಚಾಲಕಿ ದೀಪ ಪೂಜಾರಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಕೊಡಗು ಛಾಯಾಚಿತ್ರಗ್ರಾಹಕರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷ ಆವರ್ತಿ ಆರ್ ಮಹದೇವಪ್ಪ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.ಸಮಾಜ ಸೇವಕರಾದ ಹರಪಳ್ಳಿ ರವೀಂದ್ರ ಮತ್ತು ಅನುಪಮಾ ಆರ್ಯ ಅವರನ್ನು ಸನ್ಮಾನಿಸಲಾಯಿತು. ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಉಪಾಧ್ಯಕ್ಷ ರೋಷನ್, ಕಾರ್ಯದರ್ಶಿ ಲವಕುಮಾರ್, ಖಜಾಂಚಿ ಪ್ರಕಾಶ್ ಕುಂಜಲಾನ, ಮಡಿಕೇರಿ ತಾಲೂಕು ಅಧ್ಯಕ್ಷ ಸುರೇಶ್ ಮಾವಾಡ್ಕರ್, ಕುಶಾಲನಗರ ತಾಲೂಕು ಅಧ್ಯಕ್ಷ ವಿಜಯಕುಮಾರ್, ದಕ್ಷಿಣ ಕೊಡಗು ಅಧ್ಯಕ್ಷ ಡಿ.ಸಿ.ರವೀಂದ್ರ, ಸೋಮವಾರಪೇಟೆ ತಾಲೂಕು ಅಧ್ಯಕ್ಷ ಸೋಲಮನ್ ಡೇವಿಡ್ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು ಇದ್ದರು.