ಕೊಡಗು ರೆಡ್ ಅಲರ್ಟ್‌ ಘೋಷಣೆ, ಅಂಗನವಾಡಿಗಳಿಗೆ ರಜೆ

| Published : Jun 12 2025, 01:14 AM IST

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ. ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಬುಧವಾರ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗಿದೆ. ಜಿಲ್ಲೆಗೆ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಜೂ.12ರಂದು ರಜೆ ಘೋಷಿಸಲಾಗಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂಜೆ ವೇಳೆ ಮಳೆಯಾಯಿತು. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿತ್ತು. ಇದೀಗ ಸಾಧಾರಣ ಮಳೆಯಾಗಿದ್ದು, ಜೂ.12ರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.

ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 2.32 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 17.77 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 788.36 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 444.06 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ11.33 ಮಿ.ಮೀ, ಮಡಿಕೇರಿ ಹೋಬಳಿಯಲ್ಲಿ 4, ಸಂಪಾಜೆ 30.50, ಭಾಗಮಂಡಲ 10.80, ಶಾಂತಳ್ಳಿ 1.10 ಮಿ.ಮೀ.ಮಳೆಯಾಗಿದೆ.

ಅಂಗನವಾಡಿಗಳಿಗೆ ಇಂದು ರಜೆ

ಕೊಡಗು ಜಿಲ್ಲೆಗೆ ರೆಡ್ ಅಲ್ಲೆರ್ಟ್ ಘೋಷಿಸಿದ್ದು, ಹೆಚ್ಚಿನ ಗಾಳಿ-ಮಳೆ ಇರುವ ಸಂಬಂಧ ಅಂಗನವಾಡಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮವಾಗಿ ಜೂ.12ರಂದು ಒಂದು ದಿನಕ್ಕೆ ಸೀಮಿತವಾಗಿ ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಿದೆ.