ಕೊಡಗು ರೆಡ್‌ಕ್ರಾಸ್‌ಗೆ ರಾಜ್ಯದಲ್ಲೇ ಅತ್ಯುತ್ತಮ ರೆಡ್‌ಕ್ರಾಸ್ ಘಟಕದ ಹಿರಿಮೆ

| Published : Dec 17 2023, 01:45 AM IST

ಕೊಡಗು ರೆಡ್‌ಕ್ರಾಸ್‌ಗೆ ರಾಜ್ಯದಲ್ಲೇ ಅತ್ಯುತ್ತಮ ರೆಡ್‌ಕ್ರಾಸ್ ಘಟಕದ ಹಿರಿಮೆ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗು ಜಿಲ್ಲಾ ರೆಡ್‌ಕ್ರಾಸ್ ವತಿಯಿಂದ ಕಳೆದ ಹಲವು ತಿಂಗಳಲ್ಲಿ ಕೈಗೊಂಡ ವಿವಿಧ ಸಮಾಜಸೇವಾ ಚಟುವಟಿಕೆಗಳಿಗಾಗಿ ರಾಜ್ಯ ರೆಡ್‌ಕ್ರಾಸ್ ಘಟಕವು ಸಮಗ್ರ ಕಾರ್ಯರ್ವಹಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ರೆಡ್‌ಕ್ರಾಸ್ ಘಟಕವನ್ನು ಪರಿಗಣಿಸಿ ರಾಜ್ಯದಲ್ಲಿಯೇ ಕೊಡಗು ಘಟಕ ಅತ್ಯುತ್ತಮ ಸೇವೆ ಸಲ್ಲಿಸಿದೆ ಎಂದು ಪ್ರಶಸ್ತಿಗೆ ಆಯ್ಕೆಯಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಮೂಲಕ ಕಾರ್ಯನಿರ್ಚಹಿಸುತ್ತಿರುವ ಕೊಡಗು ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆಗೆ ಅತ್ಯುತ್ತಮ ಕಾರ್ಯಚಟುವಟಿಕೆಗಳಿಗಾಗಿ ಈ ಬಾರಿ ರಾಜ್ಯಮಟ್ಟದಲ್ಲಿಯೇ ಅತ್ಯುತ್ತಮ ಜಿಲ್ಲಾ ಘಟಕದ ಪ್ರಶಸ್ತಿ ಲಭಿಸಿದೆ.

ಕೊಡಗು ಜಿಲ್ಲಾ ರೆಡ್‌ಕ್ರಾಸ್ ವತಿಯಿಂದ ಕಳೆದ ಹಲವು ತಿಂಗಳಲ್ಲಿ ಕೈಗೊಂಡ ವಿವಿಧ ಸಮಾಜಸೇವಾ ಚಟುವಟಿಕೆಗಳಿಗಾಗಿ ರಾಜ್ಯ ರೆಡ್‌ಕ್ರಾಸ್ ಘಟಕವು ಸಮಗ್ರ ಕಾರ್ಯರ್ವಹಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ರೆಡ್‌ಕ್ರಾಸ್ ಘಟಕವನ್ನು ಪರಿಗಣಿಸಿ ರಾಜ್ಯದಲ್ಲಿಯೇ ಕೊಡಗು ಘಟಕ ಅತ್ಯುತ್ತಮ ಸೇವೆ ಸಲ್ಲಿಸಿದೆ ಎಂದು ಪ್ರಶಸ್ತಿಗೆ ಆಯ್ಕೆಯಾಗಿದೆ.ಡಿ.19ರಂದು ಬೆಂಗಳೂರಿನ ರಾಜಭವನದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಈ ಪ್ರಶಸ್ತಿಯನ್ನು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಗೆ ನೀಡಲಿದ್ದಾರೆ.ರೆಡ್ ಕ್ರಾಸ್ ಜಿಲ್ಲಾಧ್ಯಕ್ಷರಾಗಿ ಜಿಲ್ಲಾಧಿಕಾರಿ ವೆಂಕಟ ರಾಜಾ ಕಾರ್ಯನಿರ್ವಹಿಸುತ್ತಿದ್ದು, ಸಭಾಪತಿಗಳಾಗಿ ಬಿ.ಕೆ. ರವೀಂದ್ರ ರೈ, ಉಪಾಧ್ಯಕ್ಷರಾಗಿ ಅನಿಲ್ ಎಚ್.ಟಿ., ಪ್ರಧಾನ ಕಾರ್ಯದರ್ಶಿಯಾಗಿ ಮುರಳೀಧರ್ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ರೆಡ್‌ಕ್ರಾಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಾಲಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ. ಯೂತ್ ರೆಡ್‌ಕ್ರಾಸ್ ಮೂಲಕವೂ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ರೆಡ್‌ಕ್ರಾಸ್ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ರಕ್ತದಾನ ಶಿಬಿರಗಳನ್ನೂ ರೆಡ್‌ಕ್ರಾಸ್ ಆಯೋಜಿಸಿದ್ದು, ಎರಡು ವರ್ಷಗಳ ಹಿಂದೆ ಮಡಿಕೇರಿಯ ಸ್ವೀವರ್ಟ್‌ ಹಿಲ್‌ನಲ್ಲಿ ರೆಡ್‌ಕ್ರಾಸ್‌ಗೆ ಸಭಾಂಗಣವೂ ನಿರ್ಮಾಣವಾಗಿದೆ.