ಬಿ.ಡಿ.ಮಂಜುನಾಥ್ ಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ, ನ.20 ರಂದು ಪ್ರಶಸ್ತಿ ಪ್ರದಾನ

| Published : Nov 17 2024, 01:17 AM IST

ಬಿ.ಡಿ.ಮಂಜುನಾಥ್ ಗೆ ಕೊಡಗು ಸಹಕಾರ ರತ್ನ ಪ್ರಶಸ್ತಿ, ನ.20 ರಂದು ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ. 20ರಂದು ನಡೆಯಲಿದೆ. ಪೂರ್ವಾಹ್ನ 10.30 ಗಂಟೆಗೆ ನಗರದ ಬಾಲಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

71ನೇ ಅಖಿಲ ಭಾರತ ಸಹಕಾರ ಸಪ್ತಾಹದ ಮುಕ್ತಾಯ ಸಮಾರಂಭ, ‘ಉತ್ತಮ ವಿಶ್ವ ನಿರ್ಮಾಣ ಹಾದಿಗಾಗಿ ಹಾಗೂ ಸುಸ್ಥಿರ ಅಭಿವೃದ್ಧಿ ಗುರಿ ಸಾಧನೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ದಿನಾಚರಣೆ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಪ್ರಾಯೋಜಿತ ಕೊಡಗಿನ ಶ್ರೇಷ್ಠ ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನ.20 ರಂದು ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ಮಾಹಿತಿ ನೀಡಿದರು.ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ, ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಕೊಡಗು ಜಿಲ್ಲಾ ಸಹಕಾರ ಇಲಾಖೆ, ಕರ್ನಾಟಕ ಇನ್ ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಮಡಿಕೇರಿ ಹಾಗೂ ಸ್ಥಳೀಯ ಎಲ್ಲಾ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಪೂರ್ವಾಹ್ನ 10.30 ಗಂಟೆ ನಗರದ ಬಾಲಭವನದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂಥರ್ ಗೌಡ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎ.ಕೆ.ಮನು ಮುತ್ತಪ್ಪ ವಹಿಸಲಿದ್ದು, ಹಿರಿಯ ಸಹಕಾರಿಗಳು ಹಾಗೂ ‘ಪದ್ಮಶ್ರೀ’ ಪ್ರಶಸ್ತಿ ಪುರಸ್ಕೃತರು ರಾಣಿ ಮಾಚಯ್ಯ ಹಿರಿಯ ಸಹಕಾರಿಗಳನ್ನು ಸನ್ಮಾನಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ಉಪಾಧ್ಯಕ್ಷ ಪಿ.ಸಿ. ಮನು ರಾಮಚಂದ್ರ, ಕರ್ನಾಟಕ ರಾಜ್ಯ ಸಹಕಾರ ತೋಟಗಾರಿಕಾ ಮಹಾಮಂಡಳ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕ ಬಿ.ಎ.ರಮೇಶ್ ಚಂಗಪ್ಪ, ಕೊಡಗು ಜಿಲ್ಲಾ ಸಹಕಾರ ಯುನಿಯನ್ ಹಾಗೂ ಸಹಕಾರ ಕೇಂದ್ರ ಬ್ಯಾಂಕ್‌ನ ನಿರ್ದೇಶಕ ಎನ್.ಎಂ.ಉಮೇಶ್ ಉತ್ತಪ್ಪ, ಕೊಡಗು ಜಿಲ್ಲಾ ಸಹಕಾರ ಯೂನಿಯನ್‌ನ ನಿರ್ದೇಶಕರಾದ ಪಿ.ಸಿ.ಅಚ್ಚಯ್ಯ, ಪ್ರೇಮ ಸೋಮಯ್ಯ, ಕೆ.ಎಂ.ತಮ್ಮಯ್ಯ, ಸಿ.ಎಸ್.ಕೃಷ್ಣ ಗಣಪತಿ, ಪಿ.ವಿ.ಭರತ್, ವಿ.ಕೆ.ಅಜಯ್ ಕುಮಾರ್, ಪಿ.ಬಿ.ಯತೀಶ್, ವಿ.ಎಸ್.ಶ್ಯಾಮ್ ಚಂದ್ರ, ಎನ್.ಎ. ರ‍್ಯಾಲಿ ಮಾದಯ್ಯ, ಸಹಕಾರ ಸಂಘಗಳ ಉಪನಿಬಂಧಕ ಜಿ.ಆರ್.ವಿಜಯ್ ಕುಮಾರ್, ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪನಿರ್ದೇಶಕರಾದ ಎಂ.ಎನ್.ಹೇಮಾವತಿ, ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶೈಲಜಾ ಪಾಲ್ಗೊಳ್ಳಲಿದ್ದು, ಮಡಿಕೇರಿಯ ಕೆ.ಐ.ಸಿ.ಎಂ. ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲಾ ದಿನದ ಮಹತ್ವದ ಕುರಿತು ಮಾತನಾಡಲಿದ್ದಾರೆ.ಸನ್ಮಾನಿತರು : ಕೊಡಗು ಸಹಕಾರ ರತ್ನ: ಬಿ.ಡಿ. ಮಂಜುನಾಥ್, ಕುಂಬೂರು

ಶ್ರೇಷ್ಠ ಸಹಕಾರಿಗಳು : ನಂದಿನೆರವಂಡ ಎ.ರವಿ ಬಸಪ್ಪ ಇಬ್ಬಿವಳವಾಡಿ, ಕಾಯಪಂಡ ಟಾಟಾ ಚಂಗಪ್ಪ ವಿರಾಜಪೇಟೆ, ಪಾಸುರ ಎನ್.ಉತ್ತಪ್ಪ, ಮಾದಾಪುರ, ಶ್ರೇಷ್ಠ ಮಹಿಳಾ ಸಹಕಾರಿ ಮೊಳ್ಳೆರ ಸರಸು ಪೊನ್ನಪ್ಪ, ಸುಂಟಿಕೊಪ್ಪ. ಕೊಡಗು ಸಹಕಾರ ರತ್ನ ಪ್ರಶಸ್ತಿ : ಬಿ.ಡಿ. ಮಂಜುನಾಥ್68 ವರ್ಷದ ಬಿ.ಡಿ.ಮಂಜುನಾಥ್ ರವರು 1990 ರಲ್ಲಿ ಸೋಮವಾರಪೇಟೆ ವಿವಿಧೋದ್ದೇಶ ಸಹಕಾರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆಯಾಗುವ ಮೂಲಕ ಸಹಕಾರ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದರು. 1995 ರಿಂದ 1999 ರವರೆಗೆ ಅಧ್ಯಕ್ಷರಾದ ಇವರು ಕಳೆದ 35 ವರ್ಷಗಳಿಂದ ಆಡಳಿತ ಮಂಡಳಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಅವಧಿಯಲ್ಲಿ ಕೊಡಗಿನಲ್ಲಿಯೇ ದ್ವಿತೀಯ ಸಂಸ್ಥೆಯಾಗಿ ಸಂಘವು ಕಂಪ್ಯೂಟರೀಕರಣಗೊಂಡಿದ್ದು ಹಾಗೂ ರಾಜ್ಯದಲ್ಲಿಯೇ ಪ್ರಥಮವೆಂಬಂತೆ ಜಾಮೀನು ಸಾಲದ ವಿಮಾ ಯೋಜನೆಯನ್ನು ಜಾರಿಗೊಳಿಸಲಾಯಿತು. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನಲ್ಲಿ ಅಧ್ಯಕ್ಷರಾಗಿದ್ದ ಇವರು 3 ಅವಧಿಯಲ್ಲಿ ಆಡಳಿತ ಮಂಡಳಿಯಲ್ಲಿದ್ದರು.