ಕುಶಾಲನಗರ: ಕೊಡಗು ವಿಶ್ವವಿದ್ಯಾಲಯದ 2025-26ನೇ ಸಾಲಿನ ಪ್ರಥಮ ಮತ್ತು ತೃತೀಯ ಸೆಮಿಸ್ಟರ್ ಬಿಎಡ್ ಪದವಿ ಪರೀಕ್ಷೆ ಫಲಿತಾಂಶ ಸೋಮವಾರ ಪ್ರಕಟವಾಗಿದೆ. ಮೌಲ್ಯಮಾಪನ ಪೂರ್ಣಗೊಂಡು ಎರಡು ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ.
ಜುಲೈ ತಿಂಗಳಲ್ಲಿ ನಡೆದ ಪರೀಕ್ಷೆಯಲ್ಲಿ ವಿರಾಜಪೇಟೆಯ ಸರ್ವೋದಯ ಬಿಎಡ್ ಕಾಲೇಜು ಮತ್ತು ಪೊನ್ನಂಪೇಟೆಯ ಸಾಯಿ ಶಂಕರ್ ಕಾಲೇಜುಗಳ ಸುಮಾರು 200 ವಿದ್ಯಾರ್ಥಿಗಳು ಹಾಜರಾಗಿದ್ದರು.ಮೌಲ್ಯಮಾಪನ ಪ್ರಕ್ರಿಯೆಗೆ ಘಟಕ ಮಹಾವಿದ್ಯಾಲಯ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಮೌಲ್ಯಮಾಪನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಸೆಮಿಸ್ಟರ್ ಪರೀಕ್ಷೆಗಳಿಗೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ಸಮಗ್ರ ವಿವಿ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ (ಯುಯುಸಿಎಂಎಸ್) ಮೂಲಕ ಯಶಸ್ವಿಯಾಗಿ ನಡೆಸಲಾಗಿದ್ದು, ಫಲಿತಾಂಶವನ್ನುಯುಯುಸಿಎಂಎಸ್ ಅಥವಾ ಕೊಡಗು ವಿವಿಯ ವೆಬ್‌ಸೈಟ್ KUK.Karnataka.gov.in ಮುಖಾಂತರ ಪಡೆಯಲು ಲಭ್ಯವಿದೆ.ಪರೀಕ್ಷಾ ಫಲಿತಾಂಶವನ್ನು ಕೊಡಗು ವಿವಿ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅವರು ಯುಯುಸಿಎಂಎಸ್ ತಂತ್ರಾಂಶದಲ್ಲಿ ಪ್ರಕಟಿಸಿದರು.ವಿವಿ ಕುಲಸಚಿವ (ಮೌಲ್ಯಮಾಪನ) ಡಾ. ಸುರೇಶ್ ಎಂ. ಮತ್ತು ವಿಶೇಷಾಧಿಕಾರಿ (ಪರೀಕ್ಷಾಂಗ) ಪ್ರೊ. ರವಿಶಂಕರ್ ಎಂ.ಎನ್. ಮತ್ತು ಯುಯುಸಿಎಂಎಸ್ ಸಿಬ್ಬಂದಿ ಇದ್ದರು.