ಸಾರಾಂಶ
ಕೊಡವ ಸಮಾಜದ ವಾರ್ಷಿಕ ಮಹಾಸಭೆ ನಡೆಯಿತು. ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮಾಳೇಟಿರ ಅಭಿಮನ್ಯು ಕುಮಾರ್ ಹೇಳಿದರು.
ಕನ್ನಡಪ್ರಭವಾರ್ತೆ ಸೋಮವಾರಪೇಟೆ
ಕೊಡವ ಸಮಾಜಕ್ಕೆ ಸೇರಿದ ಚೌಡ್ಲು ಗ್ರಾಮದ ನಿವೇಶನದಲ್ಲಿ ನೂತನ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಪ್ರಸಕ್ತ ಸಾಲಿನಲ್ಲಿ ಚಾಲನೆ ನೀಡಲಾಗುವುದು ಎಂದು ಸಮಾಜದ ಅಧ್ಯಕ್ಷರಾದ ಮಾಳೇಟಿರ ಅಭಿಮನ್ಯುಕುಮಾರ್ ಹೇಳಿದರು.ಶನಿವಾರ ಸಮಾಜದ ಸಭಾಂಗಣದಲ್ಲಿ ನಡೆದ ಕೊಡವ ಸಮಾಜದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.ಸಮುದಾಯ ಭವನದ ನಿರ್ಮಾಣ ಕಾಮಗಾರಿಗೆ ಶಾಸಕರು, ಸಂಸದರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತಿತರ ಜನಪ್ರತಿನಿಧಿಗಳ ಮೂಲಕ ಸರಕಾರದ ಅನುದಾನಕ್ಕೆ ಮನವಿ ಮಾಡಲಾಗಿದೆ. ಈಗಾಗಲೇ ಸಮಾಜದ ಶ್ರೇಯೋಭಿವೃದ್ಧಿಗಾಗಿ, ಜನಾಂಗದ ಆಚಾರ ವಿಚಾರ, ಭಾಷೆ, ಸಂಸ್ಕೃತಿ ಹಾಗೂ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಸಮಾಜದ ಸದಸ್ಯರ ಓದುತ್ತಿರುವ ಮಕ್ಕಳಿಗೆ ಸಹಾಯ ಮಾಡುವ ಉದ್ದೇಶದಿಂದ ಶಾಶ್ವತ ವಿದ್ಯಾನಿಧಿಯನ್ನು ಸ್ಥಾಪಿಸಲಾಗುವುದು ಎಂದರು.ವೇದಿಕೆಯಲ್ಲಿ ಸಮಾಜದ ಉಪಾಧ್ಯಕ್ಷರಾದ ಬೊಳಂದಂಡ ಕುಟ್ಟಪ್ಪ, ಕಾರ್ಯದರ್ಶಿ ಅನಿಲ್, ಖಜಾಂಚಿ ಪಾಡೆಯಂಡ ಮುತ್ತಣ್ಣ ಸೇರಿದಂತೆ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))