ನೂತನ ಪದಾಧಿಕಾರಿಗಳಿಗೆ ಕೊಡವ ಮುಸ್ಲಿಂ ಅಸೋಸಿಯೇಷನ್ ಸನ್ಮಾನ

| Published : May 16 2024, 12:47 AM IST

ನೂತನ ಪದಾಧಿಕಾರಿಗಳಿಗೆ ಕೊಡವ ಮುಸ್ಲಿಂ ಅಸೋಸಿಯೇಷನ್ ಸನ್ಮಾನ
Share this Article
  • FB
  • TW
  • Linkdin
  • Email

ಸಾರಾಂಶ

ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡವ ಮುಸ್ಲಿಂ ಅಸೋಸಿಯೇಷನ್ (ಕೆಎಂಎ) ವತಿಯಿಂದ ನೂತನವಾಗಿ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಸಂಸ್ಥೆಯ ನಾಲ್ವರು ಕಾರ್ಯಕಾರಿ ಸಮಿತಿ ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಕೆಎಂಎ ಅಧ್ಯಕ್ಷ ದುದ್ದಿಯಂಡ ಎಚ್. ಸೂಫಿ ಹಾಜಿ ಅಧ್ಯಕ್ಷತೆಯಲ್ಲಿ ವಿರಾಜಪೇಟೆಯಲ್ಲಿರುವ ಸಂಸ್ಥೆಯ ಪ್ರಧಾನ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ ನಡೆಯಿತು.ಕೊಟ್ಟಮುಡಿ ಹಳೆ ಜುಮಾ ಮಸೀದಿ ಆಡಳಿತ ಮಂಡಳಿ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಗೊಂಡಿರುವ ಕೆ.ಎಂ.ಎ. ಕೋಶಾಧಿಕಾರಿ ಹರಿಶ್ಚಂದ್ರ ಎ. ಹಂಸ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ನೂತನ ಉಪಾಧ್ಯಕ್ಷರಾಗಿ ನೇಮಕಗೊಂಡಿರುವ ಕೆ.ಎಂ.ಎ ಸಂಘಟನಾ ಕಾರ್ಯದರ್ಶಿ ಮೀತಲತಂಡ ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾಗಿ 3ನೇ ಬಾರಿಗೆ ಆಯ್ಕೆಗೊಂಡಿರುವ ಮತ್ತು ಐಮಂಗಲ (ಕೊಮ್ಮೆತೋಡು) ಬದ್ರಿಯ ಜುಮಾ ಮಸೀದಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪುನರಾಯ್ಕೆಗೊಂಡಿರುವ ಕೋಳುಮಂಡ ರಫೀಕ್ ಮತ್ತು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಸಂಘಟನಾ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕೆ.ಎಂ.ಎ ನಿರ್ದೇಶಕರಾದ ಕುಂಡಂಡ ಎ. ರಜಾಕ್ ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಈ ನಾಲ್ವರನ್ನು ಸನ್ಮಾನಿಸಿ ಮಾತನಾಡಿದ ದುದ್ದಿಯಂಡ ಎಚ್. ಸೂಫಿ ಹಾಜಿ, ಯಾವುದೇ ಫಲಾಪೇಕ್ಷೆಯಿಲ್ಲದೆ ಸಮಾಜ ಸೇವೆಗೆ ತೊಡಗಿಸಿಕೊಳ್ಳುವವರ ಸಂಖ್ಯೆ ಕಡಿಮೆಯಾಗುತ್ತಿರುವ ಈ ಕಾಲಘಟ್ಟದಲ್ಲಿ ನಿಸ್ವಾರ್ಥಿಗಳಾಗಿ ಜನಸೇವೆಗಾಗಿ ಮುಂದೆ ಬಂದಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಸಾರ್ವಜನಿಕ ಬದುಕಿನಲ್ಲಿ ಕಪ್ಪುಚುಕ್ಕೆ ಮೂಡಿಸದೆ ಜನಸೇವೆ ಮಾಡುವುದು ಎಲ್ಲಾ ಸಾಮಾಜಿಕ ಕಾರ್ಯಕರ್ತರ ಮೊದಲ ಧ್ಯೇಯವಾಗಿರಬೇಕು. ಸದಾ ಸಮಾಜಮುಖಿಗಳಾಗಿ ನೊಂದವರ ಕಣ್ಣೀರು ಒರೆಸಿ ಅವರ ಬದುಕಿನ ಬೆಳಕಾದರೆ ನಿಸ್ವಾರ್ಥವಾದ ಸಮಾಜ ಸೇವೆಗೆ ಹೆಚ್ಚು ಅರ್ಥ ಬರುತ್ತದೆ ಎಂದು ಸಲಹೆ ನೀಡಿದಲ್ಲದೆ, ಯಾವುದೇ ರೀತಿಯ ಸಮಾಜ ಸೇವೆಗಳು ಕೇವಲ ಪ್ರಚಾರಕ್ಕೆ ಮಾತ್ರ ಸೀಮಿತವಾಗಿರದೆ ಜನರಿಗಾಗಿ ಮತ್ತು ಬಹುಪಯೋಗಿಯಾಗಿ ಮಾಡಿದರೆ ಅಂತವರನ್ನು ಸಮಾಜ ಎಂದಿಗೂ ಮರೆಯುವುದಿಲ್ಲ ಎಂದು ಕಿವಿಮಾತು ಹೇಳಿದರು.

ಹರಿಶ್ಚಂದ್ರ ಹಂಸ, ಮೀತಲತಂಡ ಇಸ್ಮಾಯಿಲ್, ಕೋಳುಮಂಡ ರಫೀಕ್ ಮತ್ತು ಕುಂಡಂಡ ರಜಾಕ್ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳಾದ ಕರತೊರೆರ ಕೆ. ಮುಸ್ತಫ, ಮಂಡೆಂಡ ಮೊಯ್ದು, ಆಲೀರ ಬಿ. ಅಬ್ದುಲ್ಲಾ, ಪೊಯಕೆರ ಎಸ್. ಮೊಹಮ್ಮದ್ ರಫೀಕ್, ದುದ್ಧಿಯಂಡ ಹೆಚ್. ಮೊಯ್ದು, ಕುಪ್ಪೋಡಂಡ ಎ. ರಶೀದ್, ಪುದಿಯಾಣೆರ ಹನೀಫ್, ಆಲೀರ ಹೆಚ್. ಅಬ್ದುಲ್ ಲತೀಫ್, ಪುಡಿಯಂಡ ಹನೀಫ್, ಆಲೀರ ಎಂ. ರಶೀದ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಈತಲತಂಡ ರಫೀಕ್ ತೂಚಮಕೇರಿ ಕಾರ್ಯಕ್ರಮ ನಿರ್ವಹಿಸಿದರು.