ಉಡುಪಿ: ಇಲ್ಲಿನ ಕೊಡವೂರು ಶಂಕರನಾರಾಯಣ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ, ನಾಡಿನ ಜನರ ಸುಭೀಕ್ಷೆಗಾಗಿ ಪ್ರಸಾದ್‌ರಾಜ್‌ ಕಾಂಚನ್‌ ನೇತೃತ್ವದಲ್ಲಿ ಮೇ 14ರಿಂದ 19ರವರೆಗೆ ನಡೆಯಲಿರುವ ಮಹಾ ರುದ್ರಯಾಗದ ಆಮಂತ್ರಣ ಪತ್ರಿಕೆಯನ್ನು ಭಾನುವಾರ ದೇಗುಲದ ​ವಸಂತ ಮಂಟಪದಲ್ಲಿ ​ಉದ್ಯಮಿ, ಅಧ್ಯಕ್ಷ ಸಾಧು ಸಾಲ್ಯಾನ್‌ ಬಿಡುಗಡೆಗೊಳಿಸಿ ಶುಭ ಹಾರೈಸಿದರು.

​ ಮಹಾರುದ್ರಯಾಗ ಸಮಿತಿಯ ಕಾರ್ಯಾಧ್ಯಕ್ಷ ಪ್ರಸಾದ್‌ರಾಜ್‌ ಕಾಂಚನ್‌ ಮಾತನಾಡಿ ಮಹಾ ರುದ್ರಯಾಗವು ನಡೆಯುವುದು ಅತ್ಯಂತ ವಿರಳ, ಈ ರುದ್ರಯಾಗದ ಜತೆಗೆ ಬಡಜನರಿಗೆ ಆರೋಗ್ಯ ಸೇವೆ ಮತ್ತು ಉದ್ಯೋಗವನ್ನು ಕಲ್ಪಿಸುವ ಮಹತ್ಕಾರ್ಯವನ್ನು ಮಾಡಲಾಗುತ್ತದೆ. ಕ್ರೀಡಾಕೂಟ, ವಸ್ತು ಪ್ರದರ್ಶನ, ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಲಿದೆ. ಸುಮಾರು 40 ಸಾವಿರ ಜನರಿಗೆ ಆಮಂತ್ರಣ ಪತ್ರಿಕೆಯನ್ನು ವಿತರಿಸಲಾಗುತ್ತದೆ. ​ಮೇ 1​4 ರಿಂದ 5 ದಿನಗಳ ಕಾಲ ಅನ್ನಸಂತರ್ಪಣೆ ಇದೆ, ವಿಶೇಷವಾಗಿ 5 ಸಾವಿರ ಮಹಿಳೆಯರಿಗೆ ಮಹಾ ರುದ್ರಯಾಗ ಸಂಕಲ್ಪದೊಂದಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು.​ ಈ ಸಂದರ್ಭದಲ್ಲಿ ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮಾದವ ಪೂಜಾರಿ ಬನ್ನಂಜೆ, ಉಪ್ಪೂರು ಸಿದ್ದಿವಿನಾಯಕ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಶಾಂತ್‌ ಸುವರ್ಣ, ಬೆಳ್ಕಳೆ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಖ್ಯಾತ್‌ ಶೆಟ್ಟಿ​ ಬೆಳ್ಕಳೆ, ನಗರಸಭಾ ಮಾಜಿ ಸದಸ್ಯ ವಿಜಯ ಕೊಡವೂರು, ಡೆಂಟಾಕೇರ್‌ನ ಡಾ. ವಿಜಯೇಂದ್ರ ವಸಂತ್‌, ಭಜನಾ ಸಂಚಾಲಕ ಧನಂಜಯ ಕಾಂಚ​ನ್, ​ದೇವಳದ ವ್ಯವಸ್ಥಾಪಾನಾ ಸಮತಿಯ ಸದಸ್ಯರಾದ ವಾದಿರಾಜ್‌​ ಸಾಲ್ಯಾನ್ , ರಾಜ ಸೇರಿಗಾರ, ಶೀಲ ಕೃಷ್ಣ ದೇವಾಡಿಗ, ಭಾಸ್ಕರ ಪಾಲನ್‌​ ಬಾಚನಬೈಲು ,​ ಕೆ. ಬಾಬ ಮೊದಲಾದವರು ಪಾಲ್ಗೊಂಡಿದ್ದರು.ವ್ಯವಸ್ಥಾನಪನಾ ಸಮಿತಿಯ ಅಧ್ಯಕ್ಷ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿದರು. ಪೂರ್ಣಿಮಾ ಜನಾರ್ದನ್‌ ನಿರೂಪಿಸಿದರು. ಸೇವಾ ಸಮಿತಿಯ ಕಾರ್ಯದರ್ಶಿ ಜನಾರ್ದನ್‌ ಕೊಡವೂರು ವಂದಿಸಿದರು.​