ಕನ್ನಡಪ್ರಭ ವಾರ್ತೆ ಕುಂದಾಪುರ
ಶಾಂತಿ ಹಾಗೂ ಸೌಹಾರ್ದತೆಯನ್ನು ಸಾರುವ ರಂಜಾನ್ ಹಬ್ಬದ ಈ ಸಂದರ್ಭದಲ್ಲಿ ಕೋಡಿಯ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆ ಆಯೋಜಿಸಿರುವ ಔತಣ ಕೂಟ ಸಮಾಜದಲ್ಲಿನ ಸಾಮರಸ್ಯಕ್ಕೆ ಶಕ್ತಿ ನೀಡುತ್ತದೆ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.ಕೋಡಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಪಿಟಿಎ ಸದಸ್ಯರಿಂದ ಮಂಗಳವಾರ ನಡೆದ ‘ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ-2025’ರಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಚೇರ್ಮನ್ ಮಹಮ್ಮದ್ ಸೈಯ್ಯದ್ ಬ್ಯಾರಿ, ಸಿದ್ದಿಕ್ ಬ್ಯಾರಿ, ಅಬ್ದುಲ್ ರೆಹಮಾನ್ ಬ್ಯಾರಿ, ಅಶ್ರಫ್ ಬ್ಯಾರಿ, ಜಯರತ್ನ ಚಾರಿಟೇಬಲ್ ಟ್ರಸ್ಟ್ ಪ್ರವರ್ತಕ ದಿನೇಶ್ ಹೆಗ್ಡೆ ಮೊಳಹಳ್ಳಿ, ಸ್ಥಳೀಯ ಪ್ರಮುಖರಾದ ಕೋಡಿ ಶಂಕರ್ ಪೂಜಾರಿ, ಅಬ್ದುಲ್ ಸಾಹೇಬ್ ಕೋಡಿ, ನಿವೃತ್ತ ಪ್ರಾಂಶುಪಾಲ ಚಂದ್ರಶೇಖರ ದೋಮ, ಚಂದ್ರಶೇಖರ ಶೆಟ್ಟಿ, ಶಮಂತ್ ಎಸ್. ಕುಂದಾಪುರ, ಸುನಿಲ್ ಕೋಡಿ, ಸುಜನ್ ಶೆಟ್ಟಿ, ಮುನಾಫ್ ಕೋಡಿ, ರಿಯಾಜ್ ಕೋಡಿ, ಅಭಿಜಿತ್ ಹೇರಿಕುದ್ರು ಇದ್ದರು.ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ ಮತ್ತು ಬ್ಯಾರೀಸ್ ಪಿಯು ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಬ್ಯಾರೀಸ್ ಡಿಗ್ರಿ ಕಾಲೇಜಿನ ಪ್ರಾಂಶುಪಾಲೆ ಸಬೀನಾ, ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ, ಬ್ಯಾರೀಸ್ ಡಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಫಿರ್ದೋಸ್, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಟ್ಟಪ್ಪ, ಬೀಬಿ ಫಾತಿಮಾ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಸುಮಿತ್ರಾ ಇದ್ದರು.ಕೋಡಿ: ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ
ಕೋಡಿಯ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್‌ನಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕರು, ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಮತ್ತು ಪಿಟಿಎ ಸದಸ್ಯರಿಂದ ‘ಬ್ಯಾರೀಸ್ ಸೌಹಾರ್ದ ಈದ್ ಮಿಲನ್ ಔತಣಕೂಟ ನಡೆಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.