ಕೋಡಿಂಬಾಡಿ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

| Published : Feb 06 2025, 12:16 AM IST

ಕೋಡಿಂಬಾಡಿ: ಎನ್‌ಎಸ್‌ಎಸ್‌ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕೋಡಿಂಬಾಡಿ ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ವಾರ್ಷಿಕ ವಿಶೇಷ ಶಿಬಿರವನ್ನು ಪುತ್ತೂರು ಶಾಸಾಕ ಅಶೋಕ್ ಕುಮಾರ್ ರೈ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಉಪ್ಪಿನಂಗಡಿ

ಎನ್.ಎಸ್.ಎಸ್. ಸೇವಾ ಶಿಬಿರದಲ್ಲಿ ಮಾಡುವ ಶ್ರಮದಾನದ ಜೊತೆ ಜೊತೆಗೆ ಸಮಾಜದಲ್ಲಿರುವ ಸಮಸ್ಯೆಗಳನ್ನು ಅರಿತುಕೊಂಡು ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಮನೋಭಾವವನ್ನು ಶಿಬಿರಾರ್ಥಿಗಳು ಬೆಳೆಸಿಕೊಳ್ಳಬೇಕು, ಆ ಮೂಲಕ ಇದರಲ್ಲಿ ಸಾರ್ಥಕತೆ ಮೂಡಿಸಿಕೊಳ್ಳಬೇಕು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಮಂಗಳವಾರ ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕೋಡಿಂಬಾಡಿ ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾದ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಎನ್.ಎಸ್.ಎಸ್. ಶಿಬಿರಕ್ಕೆ ವಿಶೇಷವಾದ ಗೌರವವಿದೆ, ಮಾನ್ಯತೆ ಇದೆ, ವಿದ್ಯಾರ್ಥಿಗಳು ಈ ಮೂಲಕ ತನ್ನ ವೃತ್ತಿ ಬದುಕಿಗೆ ಅವಶ್ಯಕತೆ ಇರುವ ಕೌಶಲ್ಯಗಳನ್ನೂ ಬೆಳೆಸಿಕೊಳ್ಳಬೇಕು ಎಂದರು.

ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಮಾತನಾಡಿ, ಹಿಂದೆಲ್ಲಾ ಎನ್.ಎಸ್.ಎಸ್. ಶಿಬಿರ ಎಂದರೆ ಕೇವಲ ಶ್ರಮದಾನಕ್ಕಷ್ಠೇ ಸೀಮಿತವಾಗಿತ್ತು. ಆದರೆ ಇಂದು ಈ ಮೂಲಕ ಹಲವು ವಿಚಾರ, ಸಂವಾದ ನಡೆಯುತ್ತದೆ. ಊರಿನ, ಗ್ರಾಮದ ಸಮಸ್ಯೆಗಳ ಬಗ್ಗೆ ತಿಳಿಯುವುದಕ್ಕೂ ಒಂದು ವೇದಿಕೆಯಾಗಿ ರೂಪುಗೊಂಡಿದ್ದು, ಇದೆಲ್ಲ ಸಂಗಮದೊಂದಿಗೆ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ರವಿರಾಜ ಎಸ್. ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಕೋಡಿಂಬಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಕಾ, ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎ. ಕೃಷ್ಣ ರಾವ್ ಆರ್ತಿಲ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮುರಳೀಧರ ರೈ ಮಠಂತಬೆಟ್ಟು, ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ಎನ್., ಹಿರಿಯ ವಿದ್ಯಾರ್ಥಿ ವಿಕ್ರಂ ಶೆಟ್ಟಿ ಮಾತನಾಡಿದರು. ಶಾಲಾ ಎಸ್.ಡಿ.ಎಂ.ಸಿ. ಉಪಾಧ್ಯಕ್ಷೆ ಶ್ರೀಮತಿ ಸ್ಪೂರ್ತಿ ರೈ, ಗ್ರಾಮ ಪಂಚಾಯಿತಿ ಸದಸ್ಯ ಜಗನ್ನಾಥ ಶೆಟ್ಟಿ, ಮಾಜಿ ಸದಸ್ಯ ಮೋನಪ್ಪ ಗೌಡ ಇದ್ದರು.

ಶಿಬಿರಾಧಿಕಾರಿಗಳಾದ ಹರಿಪ್ರಸಾದ್ ಎಸ್. ಸ್ವಾಗತಿಸಿ, ಕೇಶವ ಕುಮಾರ್ ವಂದಿಸಿದರು. ಘಟಕದ ನಾಯಕಿ ಅಶ್ವಿನಿ ಎಂ. ಕರ‍್ಯಕ್ರಮ ನಿರೂಪಿಸಿದರು.