ಕೋಮುಲ್ ಶುದ್ಧೀಕರಣದ ಸಂಕಲ್ಪ ಮಾಡಿ ಒಕ್ಕೂಟದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿತ್ತು ಎಂಬುದನ್ನು ಆಡಳಿತದಲ್ಲಿದ್ದ ಕಾಂಗ್ರೆಸ್ ಶಾಸಕರೇ ಬಹಿರಂಗವಾಗಿ ಹೇಳಿಕೆ ನೀಡಿ ಆರೋಪಿಸಿದ್ದು, ಇದರ ಸತ್ಯಾಸತ್ಯತೆ ಅರಿಯಲು ಸಮಗ್ರ ತನಿಖೆ ಅಗತ್ಯವಿದೆ. ಅಧಿಕಾರಕ್ಕೆ ಬಂದವರು ತಮ್ಮ ಸ್ವಂತ ಆಸ್ತಿಯಂತೆ ಬಳಸಿಕೊಳ್ಳುವ ಪ್ರಯತ್ನ ನಡೆಸಿದ್ದು, ಜಿಲ್ಲೆಯ ರೈತರಿಗೆ ಅನ್ಯಾಯವಾಗುತ್ತಿದೆ.