ನಿವೃತ್ತ ಪೊಲೀಸರ ಸಹಕಾರ ಅಗತ್ಯಅನುಭವಿ ಹಾಗೂ ಉತ್ತಮ ಸೇವೆಗೈದ ನಿವೃತ್ತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿ ಸಲಹೆ, ಸೂಚನೆಗಳಿಂದ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ. ಸರ್ಕಾರವು ಈಗಾಗಲೇ ನಿವೃತ್ತರಿಗೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಕರ್ಯದೊಂದಿಗೆ, ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಬೇಕು.