ಮಠಗಳಿಂದ ಧರ್ಮ ಸಂದೇಶ, ಪರಿಸರ ಕಾಳಜಿ: ಸಿದ್ದರಬೆಟ್ಟ ಶ್ರೀಶ್ರೀ ಕ್ಷೇತ್ರ ಸಿದ್ದರಬೆಟ್ಟದಲ್ಲಿ ಶ್ರೀ ಬಾಳೆಹೊನ್ನೂರು ಖಾಸಾ ಶಾಖಾ ಮಠದ 18ನೇ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಜೂ.9 ರಂದು ಭಾನುವಾರ ಬೆಳಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಪುಸ್ತಕ ದಾಸೋಹ , ಮಹಾರುದ್ರಾಭಿಷೇಕ ಹಾಗೂ ಬಿಲ್ವಾರ್ಚನೆ,ಉಚಿತ ಸಾಮೂಹಿಕ ದೀಕ್ಷೆ, ಪಲ್ಲಕ್ಕಿ ಉತ್ಸವ, ಸಾಮೂಹಿಕ ವಿವಾಹ ಹಾಗೂ ಜನಜಾಗೃತಿ ಧರ್ಮ ಸಮಾರಂಭಗಳನ್ನು ಹಮ್ಮಿಕೊಳ್ಳಲಾಗಿದೆ.