ಸ್ವಚ್ಛತೆ ಕಾಪಾಡಿ ಡೆಂಗ್ಯೂ ಮುಕ್ತ ಜಿಲ್ಲೆಯನ್ನಾಗಿಸೋಣ: ಡಾ. ಮಹೇಶ್ ಕುಮಾರ್ ಕರೆಡೆಂಗ್ಯೂ, ಚಿಕನ್ ಗುನ್ಯ ಜ್ವರವು ವೈರಸ್ ನಿಂದ ಉಂಟಾಗುತ್ತದೆ. ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಸೊಳ್ಳೆಗಳಿಂದ ಡೆಂಗ್ಯೂ, ಚಿಕನ್ ಗುನ್ಯ ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಈ ಜ್ವರವನ್ನು ರಕ್ತ ಪರೀಕ್ಷೆಯಿಂದ ಪತ್ತೆ ಹಚ್ಚಬಹುದು. ಈಡಿಸ್ ಸೊಳ್ಳೆಗಳು ಮನೆಯಲ್ಲಿನ ಸ್ವಚ್ಛ ನೀರಿನ ಸಂಗ್ರಹಗಳಲ್ಲಿ ಉತ್ಪತ್ತಿಯಾಗುತ್ತವೆ. ಅಂತಹ ನೀರಿನ ತಾಣಗಳನ್ನು ವಾರಕ್ಕೆ ಒಮ್ಮೆ ನೀರನ್ನು ಖಾಲಿ ಮಾಡಿ ಸ್ವಚ್ಛಗೊಳಿಸಬೇಕು.