ಮಾಲೀಕರಿಂದ ಕಾರ್ಮಿಕರ ಶೋಷಣೆ ನಿಲ್ಲಬೇಕು: ಗಾಂಧಿನಗರ ನಾರಾಯಣಸ್ವಾಮಿಇತ್ತೀಚಿನ ದಿನಗಳಲ್ಲಿ ಉದ್ದಿಮೆಗಳು, ಸರ್ಕಾರಿ ಕಚೇರಿಗಳು, ಕೈಗಾರಿಕೆಗಳಲ್ಲಿ ಕಾಯಂ ಸ್ವರೂಪದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳದೇ ಕೇವಲ ಗುತ್ತಿಗೆ ಕಾರ್ಮಿಕರನ್ನು, ಟ್ರೈನಿಗಳನ್ನು ನೇಮಕ ಮಾಡಿಕೊಂಡು ಅತ್ಯಂತ ಕಡಿಮೆ ವೇತನವನ್ನು ನೀಡಿ, ಹೆಚ್ಚಿನ ಕೆಲಸವನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ವೇತನವನ್ನು ನೀಡುತ್ತಿಲ್ಲ. ಈ ಬಗ್ಗೆ ಎಲ್ಲಾ ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಟಗಳನ್ನು ನಡೆಸುವ ಅಗತ್ಯ ಇದೆ.