ಜಿಲ್ಲೆಯಲ್ಲಿ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿದೆಜಿಲ್ಲೆಯಲ್ಲಿ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿದೆ. ಇದನ್ನು ನಿಯಂತ್ರಿಸಬೇಕಾದ ಪೊಲೀಸರನ್ನು ಚುರುಕುಗೊಳಿಸ ಬೇಕಾಗಿದೆ. ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆದು ಗಡಿಪಾರು ಮಾಡಬೇಕು. ರೌಡಿ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ರೌಡಿಗಳ ಪರ ಯಾವುದೇ ಶಿಫಾರಸ್ಸುಗಳನ್ನು ಪರಿಗಣಿಸಬಾರದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಖಡಕ್ ಆದೇಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.