ಬಿ-ಖಾತೆ ನೀಡಿ ಅನಧಿಕೃತ ಬಡಾವಣೆಗಳಿಗೆ ಬ್ರೇಕ್ಮುಂದಿನ ೩ ತಿಂಗಳಲ್ಲಿ ರಾಜ್ಯದೆಲ್ಲೆಡೆ ಇರುವ ಖಾತಾ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯ ಸರಕಾರ ಮುಂದಾಗಿದೆ. ಈಗಾಗಲೇ ಪುರಸಭೆ, ಪಟ್ಟಣ ಪಂಚಾಯಿತಿ, ಮುಖ್ಯಾಧಿಕಾರಿಗಳು, ಯೋಜನಾ ಪ್ರಾಧಿಕಾರದ ಅಧ್ಯಕ್ಷರು, ನಿರ್ದೇಶಕರೊಂದಿಗೆ ಸಭೆ ನಡೆಸಲಾಗಿದ್ದು ,ಪುರಸಭೆ, ಗ್ರಾ.ಪಂ.ವ್ಯಾಪ್ತಿಯ ಹಳ್ಳಿಗಳಲ್ಲಿರುವ ಅನಧಿಕೃತ ಬಡಾವಣೆಗಳಿಗೆ ಅಂತ್ಯ ಹಾಡುವಂತೆ ಸೂಚನೆ ನೀಡಲಾಗಿದೆ.