ಬಿಸಿಯೂಟ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿಮೊಟ್ಟೆ ಖರೀದಿ ಬಹುದೊಡ್ಡ ಸಮಸ್ಯೆಯಾಗಿದೆ, ಅನೇಕ ಸಂದರ್ಭದಲ್ಲಿ ಇಲಾಖೆ ನೀಡುವ ಅನುದಾನ ಮೊಟ್ಟೆ ಖರೀದಿಗೆ ಸಾಕಾಗುವುದಿಲ್ಲ, ಶಿಕ್ಷಕರು ತಮ್ಮ ಜೇಬಿನಿಂದ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ. ಕಡಿಮೆ ಸಂಖ್ಯೆ ಮಕ್ಕಳಿರುವ ಶಾಲೆಗಳಲ್ಲಿ ಬಿಸಿಯೂಟ ನಿರ್ವಹಣೆ ಬಹುದೊಡ್ಡ ಸವಾಲಾಗಿದೆ. ಇಂದಿನ ಬೆಲೆ ಏರಿಕೆ ಸಂದರ್ಭದಲ್ಲಿ ಅನುದಾನ ಹೆಚ್ಚಿಸಬೇಕು.