ತಿಂಗಳೊಳಗೆ ಒಪಿಎಸ್ ಜಾರಿಗೆ ಪ್ರಯತ್ನ: ಷಡಕ್ಷರಿ ಭರವಸೆಈ ವರ್ಷವೂ ಒಪಿಎಸ್ ಜಾರಿಯೇ ಪ್ರಮುಖ ನಿರ್ಣಯವಾಗಿದೆ, ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ ಸರಕಾರ ಒಂದು ಸಮಿತಿ ರಚಿಸಿತ್ತು. ಆದರೆ, ಆ ಸರಕಾರ ಅಧಿಕಾರದಿಂದ ಕೆಳಗಿಳಿದ ಕಾರಣ ಹಾಗೆಯೇ ನನೆಗುದಿಗೆ ಬಿದ್ದಿತ್ತು. ಈಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಐದು ಜನ ಅಧಿಕಾರಿಗಳ ಒಳಗೊಂಡ ಸಮಿತಿ ರಚಿಸಿದೆ. ಈ ಸಮಿತಿ ಈಗಾಗಲೇ ಒಪಿಎಸ್ ಜಾರಿಗೆ ಸಂಬಂಧಿಸಿದ ರಾಜ್ಯಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ಸರಕಾರಕ್ಕೆ ವರದಿ ನೀಡಲಿದ್ದು, ಸರ್ಕಾರದ ಮೇಲೆ ಒತ್ತಡ ತಂದು ಜಾರಿಗೊಳಿಸಿ ನೌಕರರಿಗೆ ಅನುಕೂಲ ಮಾಡಿಕೊಡಲಾಗುತ್ತದೆ.