ಕಾಶಿ ವಿಶ್ವೇಶ್ವರನ ದರ್ಶನಕ್ಕೆ ಹರಿದು ಬಂದ ಭಕ್ತಸಾಗರನಗರದ ಬಸ್ ನಿಲ್ದಾಣದ ಸಮೀಪ ಭಕ್ತಾಧಿಗಳಿಗೆ ಸುಸ್ವಾಗತ ಕೋರುವ ಬೃಹತ್ ಕಮಾನುಗಳೊಂದಿಗೆ ಇಡೀ ಪ್ರದೇಶ ಕೇಸರೀಮಯವಾಗಿದ್ದು, ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಜರಂಗದಳದ ಬೃಹತ್ ಕಮಾನುಗಳು, ಬಂಟಿಂಗ್ಗಳು, ಭಗವಧ್ವಜಗಳೊಂದಿಗೆ ಇದೇಮೊದಲ ಬಾರಿಗೆ ಭಾರಿ ಪ್ರಮಾಣದಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.